Saturday, May 4, 2024
spot_imgspot_img
spot_imgspot_img

ಮಂಗಳೂರು: ಪ್ರಾಧ್ಯಾಪಕಿಗೆ ಮಾತ್ರವಲ್ಲದೆ ವಿದ್ಯಾರ್ಥಿನಿಯರಿಗೂ ಮಾನಸಿಕ ಕಿರುಕುಳ; ವಿಚಾರಣೆಯ ವೇಳೆ ಬಾಯಿಬಿಟ್ಟ ಆರೋಪಿಗಳು

- Advertisement -G L Acharya panikkar
- Advertisement -

ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೊಬ್ಬರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮೂವರು ಆರೋಪಿಗಳು, ಸಂತ್ರಸ್ತ ಉಪನ್ಯಾಸಕಿಗೆ ಮಾತ್ರವಲ್ಲ ಇತರ ಕೆಲವು ಉಪನ್ಯಾಸಕಿ ಹಾಗೂ ವಿದ್ಯಾರ್ಥಿನಿಯರಿಗೂ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿ ಸಂದರ್ಭ ವಿಚಾರಣೆಯ ವೇಳೆ ಬಾಯಿಬಿಟ್ಟಿದ್ದಾರೆ.

ಪ್ರಾಧ್ಯಾಪಕಿಯೊಬ್ಬರ ಕುರಿತು ಅವಹೇಳನ ಮಾಡಿ ಸಾರ್ವಜನಿಕವಾಗಿ ಕೀಳು ಅಭಿರುಚಿಯ ಪೋಸ್ಟರ್ ಅಂಟಿಸಿ ಮಾನಸಿಕ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಬಂಟ್ವಾಳದ ಆಡಳಿತ ಮಂಡಳಿಯ ಸಂಚಾಲಕ ಪ್ರಕಾಶ್ ಶೆಣೈ, ಅರ್ಥಶಾಸ್ತ್ರ ಉಪನ್ಯಾಸಕ ಪ್ರದೀಪ್ ಪೂಜಾರಿ ಹಾಗೂ ಕ್ರೀಡಾ ತರಬೇತಿದಾರ ತಾರಾನಾಥ ಶೆಟ್ಟಿ ಇವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಬಂಧಿತರನ್ನು ಹೆಚ್ಚಿನ ವಿಚಾರಣೆಗಾಗಿ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ವಿಚಾರಣೆಯ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಶುಕ್ರವಾರ ಆರೋಪಿ ಸಂಚಾಲಕನಿಗೆ ಜಾಮೀನು ಮಂಜೂರಾಗಿದ್ದರೆ, ಇತರ ಇಬ್ಬರಿಗೆ ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿ ವಿಸ್ತರಿಸಲಾಗಿದೆ.

vtv vitla
vtv vitla

ಈ ಆರೋಪಿಗಳು ಕಾಲೇಜಿನಲ್ಲಿ ತಮ್ಮದೇ ಮಾತುಗಳನ್ನು ಎಲ್ಲರೂ ಪಾಲಿಸಬೇಕು. ಇಲ್ಲದಿದ್ದರೆ ಯಾರಿಗೂ ಭವಿಷ್ಯವಿಲ್ಲ ಎಂಬಂತೆ ವರ್ತಿಸುತ್ತಿದ್ದಈ ಹಿಂದೆಯೂ ಕೆಲವು ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರ ಮೇಲೆ ದಬ್ಬಾಳಿಕೆ ನಡೆಸಿರುವುದು ಬೆಳಕಿಗೆ ಬಂದಿದೆ.

- Advertisement -

Related news

error: Content is protected !!