Sunday, May 19, 2024
spot_imgspot_img
spot_imgspot_img

ಮಂಗಳೂರು: ಪ್ರಾರ್ಥನಾ ಮಂದಿರ ಧ್ವಂಸ ಪ್ರಕರಣ : ಇಬ್ಬರು ಅರೆಸ್ಟ್

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ಹೊರವಲಯದ ಕೂಳೂರು ಸಮೀಪದ ಪಂಜಿಮೊಗರು-ಉರುಂದಾಡಿ ಗುಡ್ಡೆ ಎಂಬಲ್ಲಿ ಫೆಬ್ರವರಿ 5 ರಂದು ಸೈಂಟ್ ಆ್ಯಂಟನಿ ಹೋಲಿ ಕ್ರಾಸ್ ಪ್ರಾರ್ಥನಾ ಕೇಂದ್ರವನ್ನು ನೆಲಸಮಗೈದ ಘಟನೆಗೆ ಸಂಬಂಧಿಸಿ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಜಪೆ ನಿವಾಸಿ ಲತೀಶ್ (25) , ಕಾವೂರು ಉರುಂದಾಡಿ‌ ನಿವಾಸಿ ಧನಂಜಯ (36) ಎಂದು ಗುರುತಿಸಲಾಗಿದೆ. ಸುಮಾರು 40 ವರ್ಷಗಳ ಹಿಂದೆ ಸ್ಥಾಪಿಸಲಾಗಿದ್ದ ಈ ಪ್ರಾರ್ಥನಾ ಮಂದಿರವನ್ನು ಕೆಡವಲಾಗಿತ್ತು. ಆರೋಪಿಗಳ ಬಂಧನಕ್ಕೆ ಕ್ರೈಸ್ತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ‌ಆಯುಕ್ತ ಶಶಿಕುಮಾರ್ ಎನ್ ತಿಳಿಸಿದ್ದಾರೆ.

- Advertisement -

Related news

error: Content is protected !!