Friday, May 3, 2024
spot_imgspot_img
spot_imgspot_img

ಮಂಗಳೂರು: ಫಾಝಿಲ್, ಮಸೂದ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ತಲಾ 30 ಲಕ್ಷ ರೂ. ಪರಿಹಾರ

- Advertisement -G L Acharya panikkar
- Advertisement -

ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್‌ರ ಸ್ವಗೃಹದಲ್ಲಿ ತುರ್ತು ಸಭೆ ನಡೆದಿದ್ದು, ಮೃತ ಬೆಳ್ಳಾರೆಯ ಮುಹಮ್ಮದ್ ಮಸೂದ್ ಮತ್ತು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಮೊನ್ನೆ ನಡೆದ ಕೊಲೆ ಪ್ರಕರಣದ ಹಿನ್ನಲೆಯಲ್ಲಿ ದ.ಕ.ಜಿಲ್ಲಾಡಳಿತ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಶಾಂತಿ ಸಭೆಯನ್ನು ಮುಸ್ಲಿಂ ಸಂಘಟನೆಗಳು ಬಹಿಷ್ಕರಿಸಿದ್ದು, ಜಿಲ್ಲೆಯಲ್ಲಿ ನಡೆದ ಮೂರು ಅಮಾಯಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೇವಲ ಪ್ರವೀಣ್ ನೆಟ್ಟಾರು ಬಿಜೆಪಿ ಕಾರ್ಯಕರ್ತನ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ 25 ಲಕ್ಷ ರೂ. ಪರಿಹಾರ ನೀಡಿರುವುದನ್ನು ಮತ್ತು ಉಳಿದ ಇಬ್ಬರು ಅಮಾಯಕ ಮುಸ್ಲಿಮರ ಮನೆಗೆ ಭೇಟಿ ನೀಡದೆ ಮುಖ್ಯಮಂತ್ರಿಯವರ ಅಮಾನವೀಯ ನಿಲುವಿಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಯಿತು.

ಇನ್ನು ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮಸೂದ್ ಮತ್ತು ಫಾಝಿಲ್‌ನ ಕುಟುಂಬಸ್ಥರಿಗೆ ತಲಾ 30 ಲಕ್ಷ ರೂ. ಸಹಾಯ ಧನ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಮಾಜಿ ಶಾಸಕ ಮೊಯ್ದಿನ್ ಬಾವಾ, ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ತಾಝ್ ಅಲಿ, ಕೆ. ಅಶ್ರಫ್, ಹನೀಫ್ ಹಾಜಿ ಬಂದರ್, ಸೈಯದ್ ಅಹ್ಮದ್ ಬಾಷಾ ತಂಙಳ್ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!