Saturday, June 6, 2026
spot_imgspot_img
spot_imgspot_img

ಮಂಗಳೂರು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಹ್ಯಾಂಡ್‌ಬ್ಯಾಗ್‌ನಿಂದ ಪರ್ಸ್‌ ಎಗರಿಸಿದ ಮಹಿಳೆ; ಕಳ್ಳಿಯ ಕೈ ಚಳಕ ಸಿಸಿಟಿವಿಯಲ್ಲಿ ಸೆರೆ

- Advertisement -
- Advertisement -

ಮಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಹ್ಯಾಂಡ್‌ಬ್ಯಾಗ್‌ನಿಂದ ಪಕ್ಕದಲ್ಲೇ ಕುಳಿತಿದ್ದ ಮಹಿಳೆಯೋರ್ವಳು ಪರ್ಸ್‌ ಎಗರಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ನಗರದ ಖಾಸಗಿ ಬಸ್ಸೊಂದು ಮಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದಾಗ ಬಸ್ಸಿನಲ್ಲಿದ್ದ ಪ್ರಯಾಣಿಕೆಯ ಹ್ಯಾಂಡ್‌ಬ್ಯಾಗ್‌ನಿಂದ ಪಕ್ಕದ ಸಿಟ್‌ನಲ್ಲಿ ಕುಳಿತಿದ್ದ ಮಹಿಳೆ ಕದ್ದಿದ್ದಾಳೆ. ಪ್ರಯಾಣಿಕ ಮಹಿಳೆಯ ಅರಿವಿಗೆ ಒಂದೂ ಚೂರೂ ಗೊತ್ತಾಗದಂತೆ ಪರ್ಸ್ ಕಳವು ಮಾಡಲಾಗಿದೆ.

ಈ ಹಿನ್ನೆಲೆ ಮಂಗಳೂರಿನಲ್ಲಿ ಮತ್ತೆ ಸರಕಳ್ಳಿಯರು, ಪರ್ಸ್ ಕಳ್ಳರು ಹೆಚ್ಚಿದ್ದು, ಬಸ್ಸಿನಲ್ಲಿ ಸಂಚರಿಸುವ ಪ್ರಯಾಣಿಕರು ಎಚ್ಚರಿಕೆ ವಹಿಸಿಕೊಳ್ಳುವಂತೆ ನಗರದ ಖಾಸಗಿ ಬಸ್ಸು ಸಿಬ್ಬಂದಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುವ ವಿಡಿಯೋವೊಂದು ವೈರಲ್ ಆಗಿದೆ. ಈ ಕಳವು ಕೃತ್ಯ ಬಸ್ಸಿನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

- Advertisement -

Related news

error: Content is protected !!