Sunday, July 26, 2026
spot_imgspot_img
spot_imgspot_img

ಮಂಗಳೂರು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ..!

- Advertisement -
- Advertisement -

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಬಂಧಿತ ಆರೋಪಿ.

ಯುವತಿ ಸೋಮವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮುಸ್ತಾಫಾ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಯುವತಿಗೆ ಹಾಗೂ ಸಹ ಪ್ರಯಾಣಿಕರಿಗೆ ಜೀವ ಬೆದರಿಕೆ ಹಾಕಿದ್ದ.

ಈ ಕುರಿತು ಯುವತಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!