Thursday, May 2, 2024
spot_imgspot_img
spot_imgspot_img

ಮಂಗಳೂರು: ಬಿಪಿಎಲ್‍ನಿಂದ ಎಪಿಲ್‍ಗೆ ಬದಲಾಗಿರುವ ಪಡಿತರ ಚೀಟಿಗಳ ಪುನರ್ ಮಂಜೂರಾತಿಗೆ ಪರಿಶೀಲನೆ

- Advertisement -G L Acharya panikkar
- Advertisement -

ಮಂಗಳೂರು: ಜಿಲ್ಲೆಯಲ್ಲಿ ಬಿಪಿಎಲ್‍ನಿಂದ ಎಪಿಲ್‍ಗೆ ಪರಿವರ್ತಿಸಲಾದ ಪಡಿತರ ಚೀಟಿಗಳ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಪರಿವರ್ತಿಸಲಾದ ಪಡಿತರ ಚೀಟಿದಾರರಿಗೆ ಆಹಾರ ವಿತರಣೆಗೆ ಸೂಕ್ತ ಕ್ರಮಕೈಗೊಳ್ಳುವ ಕುರಿತು ಪಡಿತರ ಚೀಟಿಗಳ ಪುನರ್ ಪರಿಶೀಲನೆ ಕುರಿತಂತೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಪಡಿತರ ಚೀಟಿದಾರರ ಪೈಕಿ 1,595 ಜನರು ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. 1.20 ಲಕ್ಷ ರೂಪಾಯಿಗಳಿಗೂ ಹೆಚ್ಚು ಆದಾಯವಿರುವ 3,526 ಪಡಿತರದಾರರು ಸೇರಿದಂತೆ ಒಟ್ಟು 5,121 ಪ್ರಸ್ತುತ ಆದಾಯ ಹೆಚ್ಚಿರುವ ಹಿನ್ನಲೆಯಲ್ಲಿ ಪಡಿತರ ಆಹಾರ ಸೌಲಭ್ಯಗಳನ್ನು ಪಡೆಯಲಾಗದೇ ಆತಂಕದಲ್ಲಿರುವವರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಆದಾಯ ಹೆಚ್ಚಿರುವ 3,526 ಫಲಾನುಭವಿಗಳ ಪೈಕಿ, 820 ಮಂದಿಯ ಪಡಿತರ ರದ್ದು ಪಡಿಸಿದ್ದು, ಉಳಿದ 2,706 ಜನರ ಪಡಿತರ ತಡೆಹಿಡಿಯಬಾರದು ಎಂದು ಜಿಲ್ಲಾ ಉಸುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಆದಾಯ ತೆರಿಗೆ ಪಾವತಿದಾರರು ಆರ್ಥಿಕವಾಗಿ ಬಡವರಾಗಿದ್ದರೂ ಕೂಡ, ವಾಸಕ್ಕೆ ಮನೆ ನಿರ್ಮಿಸಿಕೊಳ್ಳಲು ಬ್ಯಾಂಕ್‍ನಿಂದ ಸಾಲಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿದ್ದು, ಅಂತಹವರ ಪಡಿತರ ಚೀಟಿಯನ್ನು ಬಿಪಿಎಲ್‍ನಿಂದ ಎಪಿಎಲ್‍ಗೆ ಪರಿವರ್ತಿಸಬಾರದು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ರಮ್ಯಾ ಮಾತನಾಡಿ, ಈ ಬಗ್ಗೆ ವಿವರವಾದ ವರದಿಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಆಯುಕ್ತರಿಗೆ ಸಲ್ಲಿಸಿ ಅವರಿಂದ ಅನುಮತಿ ಪಡೆಯುವುದಾಗಿ ತಿಳಿಸಿದರು.

- Advertisement -

Related news

error: Content is protected !!