Sunday, May 19, 2024
spot_imgspot_img
spot_imgspot_img

ಮಂಗಳೂರು: ಬುರ್ಖಾ ಧರಿಸಿ ಅಸಭ್ಯವಾಗಿ ವರ್ತಿಸಿದರೆ ಹುಷಾರ್: ಕರಾವಳಿಯ ಮುಸ್ಲಿಂ ಯುವತಿಯರಿಗೆ ಸಾಮಾಜಿಕ ಜಾಲತಾಣದಲ್ಲಿ ವಾರ್ನಿಂಗ್

- Advertisement -G L Acharya panikkar
- Advertisement -

ಮಂಗಳೂರು: ಕರಾವಳಿಯ ಮುಸ್ಲಿಂ ಹೆಣ್ಣು ಮಕ್ಕಳಿಗೆ ವಾರ್ನಿಂಗ್ ನೀಡಿರುವ ಫೇಸ್ ಬುಕ್ ಪೋಸ್ಟ್ ಒಂದು ವೈರಲ್ ಆಗಿದೆ.

ಸಿಟಿ ಸೆಂಟರ್ ಕಾರ್ ಪಾರ್ಕಿಂಗ್ ಮಾಡುವ ಸ್ಥಳದಲ್ಲಿ ಬುರ್ಖಾ ಹಾಕಿಕೊಂಡು ನಿಮ್ಮ ಅಸಭ್ಯ ವರ್ತನೆಗಳನ್ನು ಕಂಡು ನಮ್ಮ ಕಾರ್ಯಕರ್ತರು ಬುದ್ಧಿ ಮಾತು ಹೇಳಿ ಪೋಷಕರಿಗೂ ತಿಳಿಸಿ ಎಚ್ಚರಿಕೆಯನ್ನು ಕೊಟ್ಟಿದ್ದೇವೆ. ಆದ್ದರಿಂದ ಇನ್ನೂ ಮುಂದೆ ಇಂತಹ ಅಹಿತಕರ ಘಟನೆ ನಮ್ಮ ಕಾರ್ಯಕರ್ತರ ಕಣ್ಣಿಗೆ ಬಿದ್ದರೆ, ಧರ್ಮದೇಟು ಕೊಟ್ಟು ಯಾವುದೇ ಮುಲಾಜಿಲ್ಲದೆ ಕಾರ್ಯ ನಿರ್ವಹಿಸಳಿದ್ದೇವೆ. ಆದ್ದರಿಂದ ಪೋಷಕರೆ ನಿಮ್ಮ-ನಿಮ್ಮ ಮಕ್ಕಳ ಚಲನವಲನಗಳನ್ನು ಪರಿಶೀಲನೆ ಮಾಡಿ ಕಾಲೇಜ್‌ಗೆ ಎಷ್ಟು ಗಂಟೆಗೆ ತಲಾಪುತ್ತಾಳೆ, ಕಾಲೇಜಿನಿಂದ ಮನೆಗೆ ಎಷ್ಟು ಗಂಟೆಗೆ ತಲುಪುತ್ತಾಳೆ ಎಂದು ಗಮನಿಸಿ ಎಂದು ಪೋಸ್ಟ್ ನಲ್ಲಿ ಹೇಳಲಾಗಿದೆ.

vtv vitla
vtv vitla

ಮುಸ್ಲಿಂ ಡಿಫೆನ್ಸ್ ಫೋರ್ಸ್(ಎಂಡಿಎಫ್) ಎನ್ನುವ ಹೆಸರಿನ ಮುಸ್ಲಿಂ ಸಂಘಟನೆಯೊಂದರಿಂದ ಈ ರೀತಿ ಸಂದೇಶ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಮಾತನಾಡಿರುವ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಈ ಬಗ್ಗೆ ನಮಗೆ ದೂರು ಬಂದಿದ್ದು, ಈ ಬಗ್ಗೆ ನಾವು ಗಮನಹರಿಸಿದ್ದು, ಇದು ವಿದೇಶಗಳಲ್ಲಿ ಇರುವ ನಂಬರ್‌ಗಳಿಂದ ಇದನ್ನು ಪೋಸ್ಟ್ ಹಾಕುತ್ತಿದ್ದು, ಇಲ್ಲವೇ ವಿದೇಶದ ನಂಬರ್‌ಗಳನ್ನು ಇಲ್ಲಿ ಬಳಕೆ ಮಾಡಲಾಗುತ್ತಿದೆ ಅಂತ ಹೇಳಿದ್ದಾರೆ. ಇದೇ ವೇಳೇ ಅವರು ಮಾತನಾಡಿ ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಅಂತ ಹೇಳಿದ್ದಾರೆ.

- Advertisement -

Related news

error: Content is protected !!