Saturday, May 18, 2024
spot_imgspot_img
spot_imgspot_img

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ ಬಾಲಕಿ ಗೋವಾದಲ್ಲಿ ಪತ್ತೆ

- Advertisement -G L Acharya panikkar
- Advertisement -

ಮಂಗಳೂರು: ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಮನೆಯಿಂದ ಸೋಮವಾರ ನಾಪತ್ತೆಯಾಗಿದ್ದ ಬಾಲಕಿ ಬುಧವಾರ ಗೋವಾದಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ಆಕೆ ಮಂಗಳವಾರ ಮುಂಜಾವ 3ಕ್ಕೆ ನಗರದ ಬಿಜೈ ಸರಕಾರಿ ಬಸ್ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಳು. ಅಲ್ಲಿಂದ ರಿಕ್ಷಾವೊಂದನ್ನು ಬಾಡಿಗೆಗೆ ಗೊತ್ತುಪಡಿಸಿ ಮುಕ್ಕ ಬೀಚ್‌ಗೆ ಹೋಗಿ ಸಂಜೆ 5.55ಕ್ಕೆ ಮರಳಿ ಬಿಜೈ ಸರಕಾರಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ಬಿಜೈ ಸರಕಾರಿ ಬಸ್ ನಿಲ್ದಾಣದ ಸಿಸಿ ಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆ ಬಳಿಕ ಈಕೆ ಎಲ್ಲಿಗೆ ತೆರಳಿದ್ದಾಳೆ ಎನ್ನುವ ಮಾಹಿತಿ ಸಿಕ್ಕಿರಲಿಲ್ಲ. ಬೆಂಗಳೂರು ಪೊಲೀಸರು ಮಂಗಳೂರು ಹಾಗೂ ಧರ್ಮಸ್ಥಳಕ್ಕೆ ಆಗಮಿಸಿ ಹುಡುಕಾಟ ನಡೆಸಿದ್ದರು. ಅಲ್ಲದೆ ಈಕೆ ನಾಪತ್ತೆಯಾಗಿರುವ ಬಗ್ಗೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿತ್ತು. ಈಕೆ ಗೋವಾಕ್ಕೆ ತೆರಳಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಳಿಕ ಅಲ್ಲಿ ಆಕೆಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!