


ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭಾರತ್ ಫ್ರೆಂಡ್ಸ್ ಕ್ಲಬ್ (ರಿ), ಇರಾ ಇದರ ಆಶ್ರಯದಲ್ಲಿ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ ರಾಷ್ಟ್ರೀಯ ಮಟ್ಟದ “ಎ” ಗ್ರೇಡ್ ಇರಾ ಕಬಡ್ಡಿ – 2023 ಮತ್ತು ಸಾಂಸ್ಕೃತಿಕ ಕಲಾ ವೈಭವವು ಫೆ. 11, 12 ರಂದು ಇರಾ ಶಾಲಾ ಮೈದಾನದಲ್ಲಿ ನಡೆಯಲಿದೆ.
ಫೆ. 11 ರಂದು ಬೆಳಿಗ್ಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರು ಕರಾವಳಿ ಶಿಕ್ಷಣ ಸಮೂಹ ಸಂಸ್ಥೆಯ ಸ್ಥಾಪಕಾಧ್ಯಕ್ಷ ಗಣೇಶ್ ರಾವ್ ಉದ್ಘಾಟಿಸಲಿದ್ದಾರೆ. ವಿಧಾನ ಸಭಾ ಪ್ರತಿಪಕ್ಷ ಉಪನಾಯಕ ಯು.ಟಿ ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ಗಂಟೆ 7 ಕ್ಕೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಂಗಳೂರು ಶ್ರೀದೇವಿ ಎಜ್ಯುಕೇಶನ್ ಸಂಸ್ಥೆಯ ಚೇರ್‌ಮೆನ್ ಎ.ಸದಾನಂದ ಶೆಟ್ಟಿ ಮಂಗಳೂರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಬಹುಮಾನ ವಿತರಿಸಲಿದ್ದಾರೆ.
ಫೆ. 12 ರಂದು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ಚಿಕ್ಕಮಗಳೂರು ಎಮ್.ಡಿ ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ.ನ ಚೇರ್‌ಮೇನ್ ಕಿಶೋರ್ ಕುಮಾರ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಕೈರಂಗಳ ಪುಣ್ಯಕೋಟಿನಗರ ಶಾರದಾಗಣಪತಿ ವಿದ್ಯಾಕೇಂದ್ರದ ಸಂಚಾಲಕರಾದ ಟಿ.ಜಿ ರಾಜಾರಾಮ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರಿನ ಪ್ರಖ್ಯಾತ ವೈದ್ಯರಾದ ಡಾ| ಹಂಸರಾಜ ಆಳ್ವ ಮಂಗಳೂರು ಹಾಗೂ ರಾಷ್ಟ್ರೀಯ ಮಟ್ಟದ ಮಾಜಿ ಕಬಡ್ಡಿ ಆಟಗಾರರಾದ ರತನ್ ಶೆಟ್ಟಿ ಮಂಗಳೂರು, ಅಬ್ದುಲ್ ಜಬ್ಬಾರ್ ಕಲ್ಲಡ್ಕ, ಗಣೇಶ ಕುಂಬಳೆ ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








