Thursday, April 25, 2024
spot_imgspot_img
spot_imgspot_img

ಮಂಗಳೂರು: ಭೀಕರ ರಸ್ತೆ ಅಪಘಾತಕ್ಕೆ ತಂದೆ-ಮಗಳು ದುರ್ಮರಣ

- Advertisement -G L Acharya panikkar
- Advertisement -
vtv vitla

ಮಂಗಳೂರು: ನಗರದ ನಂತೂರು ಸರ್ಕಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು, ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂಬುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಲಾರಿ ಚಾಲಕನಿಗೆ ಧರ್ಮದೇಟು ನೀಡಿದ ಸ್ಥಳೀಯರು

ಲಾರಿ ಚಾಲಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದು , ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!