Sunday, June 14, 2026
spot_imgspot_img
spot_imgspot_img

ಮಂಗಳೂರು: ಮಳಲಿ ಮಸೀದಿ ವಿವಾದ..! ನಾಳೆ ಹೊರಬೀಳಲಿದೆ ಮಹತ್ವದ ತೀರ್ಪು

- Advertisement -
- Advertisement -

ಮಂಗಳೂರು: ಮಳಲಿ ಮಸೀದಿಯಲ್ಲಿ ಕರಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದ ಪ್ರಕರಣ. ಮಸೀದಿ ಕೆಡವಿದಾಗ ಅಲ್ಲಿ ದೇಗುಲದ ಮಾದರಿಯಲ್ಲಿ ರಚನೆ ಕಂಡುಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ನಾಳೆ (ನ.9) ತೀರ್ಪು ನೀಡಲಿದೆ.

ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಬಳಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು. ಮಳಲಿ ಮಸೀದಿ ಜಾಗದಲ್ಲಿ ಕೋರ್ಟ್ ಕಮಿಷನರ್ ಮೂಲಕ ಸರ್ವೆ ನಡೆಸಲು ಆದೇಶ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಸಲ್ಲಿಸಿತ್ತು.

ಈ ಮನವಿಯನ್ನು ಆಕ್ಷೇಪಿಸಿದ್ದ ಮಸೀದಿ ಮಂಡಳಿ, ಇಂಥ ಆದೇಶ ಮಾಡಲು ವಿಚಾರಣಾ ನ್ಯಾಯಾಲಯಕ್ಕೆ ಅಧಿಕಾರವಿಲ್ಲ. ವಿಶ್ವ ಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಎಂದು ಕೋರಿತ್ತು. ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯವು ಆಗಸ್ಟ್ 27 ರಂದೇ ತೀರ್ಪು ಪ್ರಕಟಿಸಲಿದೆ ಎಂದು ಹೇಳಿದ್ದು ಅ.17ಕ್ಕೆ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿತ್ತು. ಆದರೆ ಅಂದು ಮತ್ತೊಮ್ಮೆ ನ.9ಕ್ಕೆ ಕಲಾಪವನ್ನು ಮುಂದೂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಂಗಳೂರು ನ್ಯಾಯಾಲಯ ತೀರ್ಪು ನೀಡಲಿದೆ.

- Advertisement -

Related news

error: Content is protected !!