Thursday, May 9, 2024
spot_imgspot_img
spot_imgspot_img

ಮಂಗಳೂರು: ಮಹಾನಗರ ಪಾಲಿಕೆಯ ಅಧಿಕಾರಿಗಳ ಸೋಗಿನಲ್ಲಿ ಬಂದು ಮನೆಗೆ ಕನ್ನ; ನಗದು ಸಹಿತ ಚಿನ್ನಾಭರಣ ಕಳವು॒!

- Advertisement -G L Acharya panikkar
- Advertisement -
vtv vitla
vtv vitla
vtv vitla

ಮಂಗಳೂರು: ನಗರದ ಉರ್ವಸ್ಟೋರ್‌‌‌‌‌‌‌ ಬಳಿಯ ದಡ್ಡಲ್‌ ಕಾಡ್‌‌‌‌ನಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳ ಸೋಗಿನಲ್ಲಿ ಮನೆಯೊಂದಕ್ಕೆ ಬಂದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ನಡೆದಿದೆ.

In 10 minutes, Odisha robbers make away with cash, gold worth Rs 10 crore-  The New Indian Express

ನ.16ರ ಬೆಳಗ್ಗೆ 10.30ರ ಸುಮಾರಿಗೆ ದಡ್ಡಲ್‌‌‌ಕಾಡ್‌‌ ನ ಮಹಿಳೆಯಿದ್ದ ಮನೆಯೊಂದಕ್ಕೆ ಬಂದಿದ್ದ ಇಬ್ಬರು ಮಂಗಳೂರು ನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಎಂದು ಹೇಳಿ ಸ್ವಚ್ಛತೆಯ ಕುರಿತು ಪರಿಶೀಲನೆ ನಡೆಸಲಿದೆ ಎಂದು ಹೇಳಿದ್ದಾರೆ.

ಬಳಿಕ ಮಹಿಳೆಯನ್ನು ಮನೆಯ ಹಿಂಬದಿಗೆ ಕರೆದುಕೊಂಡು ಹೋಗಿ ಸ್ವಚ್ಛತೆ ಬಗ್ಗೆ ನಾಟಕವಾಡಿದ್ದಾರೆ. ಈ ವೇಳೆ ಮಹಿಳೆ ನೆರೆಮನೆಯವರನ್ನು ಕರೆದಿದ್ದು, ನೆರೆಮನೆಯವರು ಬಂದು ಸಂಶಯ ವ್ಯಕ್ತಪಡಿಸಿ, ಅವರಲ್ಲಿ ಗುರುತಿನ ಚೀಟಿ ನೀಡಿ ಎಂದು ಕೇಳಿದ್ದಾರೆ. ಆಗ ಆ ಇಬ್ಬರು ಗುರುತಿನ ಚೀಟಿ ಬೈಕ್‌ನಲ್ಲಿದೆ ತರುತ್ತೇವೆ ಎನ್ನುತ್ತಾ ಅಲ್ಲಿಂದ ವಾಪಾಸ್ಸಾಗಿದ್ದಾರೆ.

ಸಂಜೆ ವೇಳೆ ಮಹಿಳೆ ಮನೆಯ ಒಳಗಿದ್ದ ಕಪಾಟಿನಲ್ಲಿ ನೋಡಿದಾಗ 68 ಗ್ರಾಂ ಚಿನ್ನಾಭರಣ ಹಾಗೂ 71,000 ರೂ. ನಗದು ಕಳವಾಗಿರುವುದು ಗಮನಕ್ಕೆ ಬಂದಿದೆ. ಇಬ್ಬರು ವ್ಯಕ್ತಿಗಳು ಮನೆಯ ಹಿಂಭಾಗದಲ್ಲಿ ಮಹಿಳೆಯೊಂದಿಗೆ ಮಾತನಾಡುತ್ತಿದ್ದ ಸಂದರ್ಭ ಮಹಿಳೆಯ ಗಮನಕ್ಕೆ ಬಾರದಂತೆ ಇನ್ನೋರ್ವ ಮನೆಯೊಳಗೆ ಪ್ರವೇಶಿಸಿ ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಕಪಾಟಿನ ಕೀ ಕಪಾಟಿನ ಎದುರೇ ನೇತು ಹಾಕಿದ್ದರಿಂದ ಸುಲಭವಾಗಿ ಕಳವು ಮಾಡಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆಯ ಬಗ್ಗೆ ಉರ್ವ ಪೊಲೀಸರು ಪ್ರಕರಣ ದಾಖಲಾಗಿದೆ.

vtv vitla
- Advertisement -

Related news

error: Content is protected !!