Sunday, May 5, 2024
spot_imgspot_img
spot_imgspot_img

ಮಂಗಳೂರು: ಮಹಾನಗರ ಪಾಲಿಕೆಯ ಮೇಯರ್‌ ಚುನಾವಣೆಗೆ ದಿನಾಂಕ ಫಿಕ್ಸ್‌

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಸೆ. 9ರಂದು ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದೆ. ಇನ್ನು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.

ಕಳೆದ ಮಾರ್ಚ್‌ 2ರಂದು ನಡೆಯಬೇಕಾಗಿದ್ದ ಚುನಾವಣೆಯು ಸುಪ್ರೀಂ ಕೋರ್ಟ್‌ ಆದೇಶವೊಂದರ ಗೊಂದಲದಿಂದ ಮುಂದೂಡಿಕೆಯಾಗಿತ್ತು. ಹೀಗಾಗಿ ಒಂದು ವರ್ಷ ಅವಧಿ ಪೂರ್ಣಗೊಳಿಸಿದ್ದ ಪ್ರೇಮಾನಂದ ಶೆಟ್ಟಿ ಅವರೇ ಮೇಯರ್ ಸ್ಥಾನದಲ್ಲಿ ಹಾಗೂ ಸುಮಂಗಳಾ ರಾವ್ ಉಪಮೇಯರ್ ಸ್ಥಾನದಲ್ಲಿ ಮುಂದುವರಿದಿದ್ದರು. ಸುಮಾರು 6 ತಿಂಗಳ ಕಾಲ ಹೆಚ್ಚುವರಿ ಅಧಿಕಾರವಧಿ ಅವರಿಬ್ಬರಿಗೆ ಲಭಿಸಿತ್ತು. ಈ ಮೇಯರ್ ಅಧಿಕಾರವು ಅವಧಿ ಮೀರಿ ಮುಂದುವರಿದ ಕಾರಣ ಈಗಿರುವ ಬಿಜೆಪಿ ಆಡಳಿತದ ಕೊನೆಯ ಮೇಯರ್ ಅಧಿಕಾರಾವಧಿ ಸುಮಾರು 6 ತಿಂಗಳು ಕಡಿತವಾಗಲಿದೆ.

ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್‌ಡಿಪಿಐ 2 ಸ್ಥಾನಗಳನ್ನು ಹೊಂದಿದೆ. 23 ನೇ ಅವಧಿಯ ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಸ್ಥಾನವನ್ನು ಹಿಂದುಳಿದ ವರ್ಗ ಮಹಿಳೆಗೆ ಮೀಸಲಿರಿಸಲಾಗಿದೆ.

- Advertisement -

Related news

error: Content is protected !!