- Advertisement -
- Advertisement -

ಮಂಗಳೂರು: ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಬಸ್ ನಿಲ್ದಾಣದ ಬಳಿ ಗಾಂಜಾ ಸೇದುತ್ತಿದ್ದ ಅರ್ಕುಳ ವಳಚಿಲ್ ಮನೆ ನಿವಾಸಿ ಅಬೂಬಕರ್ ಮಿಸ್ಬಾ ಇಸ್ಮಾಯಿಲ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ನಿಷೇಧಿತ ಗಾಂಜಾ ಸೇವನೆ ಮಾಡುತ್ತಿರುವುದು ದೃಢಪಟ್ಟಿದೆ.
ಈ ಬಗ್ಗೆ ಕಂಕನಾಡಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


- Advertisement -