Saturday, April 27, 2024
spot_imgspot_img
spot_imgspot_img

ಮಂಗಳೂರು: ಯುವಕನಿಗೆ ಚೂರಿ ಇರಿತ; ಪ್ರಕರಣ ದಾಖಲು

- Advertisement -G L Acharya panikkar
- Advertisement -

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಅಜ್ಜಿನಡ್ಕ ಉಚ್ಚಿಲ ಬಳಿ ನಡೆದಿದೆ.

ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಅಜ್ಜಿನಡ್ಕ ನಿವಾಸಿ ಆರಿಫ್ (28) ಎಂದು ಗುರುತಿಸಲಾಗಿದೆ.


ಹಳೇ ದ್ವೇಷದ ಕಾರಣ ನಾಲ್ವರ ತಂಡ ವಾಹನದಲ್ಲಿ ಬಂದು ಈ ಕೃತ್ಯ ಎಸಗಿದ್ದು, ಗಂಭೀರ ಗಾಯಗೊಂಡ ಆರೀಫ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್’ನಲ್ಲಿ ಧಕ್ಕೆ ಮೀನು ಮಾರುಕಟ್ಟೆಗೆ ಹೋಗಿ ವಾಪಸ್ ಮನೆ ಕಡೆ ಬರುವ ವೇಳೆ ಈ ಘಟನೆ ನಡೆದಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ದಾಖಲಾಗಿದೆ.

- Advertisement -

Related news

error: Content is protected !!