Friday, May 3, 2024
spot_imgspot_img
spot_imgspot_img

ಮಂಗಳೂರು: ಯುವತಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ; ಆರೋಪಿಯ ಬಂಧನ

- Advertisement -G L Acharya panikkar
- Advertisement -

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಬಂಧಿತ ಆರೋಪಿ. ಯುವತಿ ಸೋಮವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮುಸ್ತಾಫಾ ಲೈಂಗಿಕ ಕಿರುಕುಳ ನೀಡಿದ್ದಾನೆ.

ಈ ವೇಳೆ ಯುವತಿಗೆ ಹಾಗೂ ಸಹ ಪ್ರಯಾಣಿಕರಿಗೆ ಜೀವ ಬೆದರಿಕೆ ಹಾಕಿದ್ದ. ಈ ಕುರಿತು ಯುವತಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಸ್ತಾಫಾ ಬೆಂಗಳೂರಿನಲ್ಲಿ ಚಪ್ಪಲಿ ಅಂಗಡಿ ಹೊಂದಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಪ್ರ ತಿಕ್ರಿಯಿಸಿದ ಪೊಲೀಸ್ ಆಯುಕ್ತ ಶಶಿಕುಮಾರ್ ಇಂತಹ ಕಿರುಕುಳಕ್ಕೊಳಗಾದರೆ ಮಹಿಳೆಯರು ಧೈರ್ಯದಿಂದ ದೂರು ನೀಡಿ ಎಂದಿದ್ದಾರೆ.

- Advertisement -

Related news

error: Content is protected !!