Friday, May 3, 2024
spot_imgspot_img
spot_imgspot_img

ಮಂಗಳೂರು: ರಸ್ತೆಯಲ್ಲಿ ಬಿದ್ದಿದ್ದ ಆಯಿಲ್​​ಗೆ ಮರಳು ಹಾಕಿ ಗುಡಿಸಿ ಸಾಮಾಜಿಕ ಕಳಕಳಿ ಮೆರೆದ ಇಬ್ಬರು ಪೊಲೀಸ್ ಕಾನ್ಸ್​ಟೇಬಲ್ಸ್!

- Advertisement -G L Acharya panikkar
- Advertisement -
driving

ಮಂಗಳೂರು: ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಕಾನ್ಸ್​ಟೇಬಲ್​ಗಳು ಸಾಮಾಜಿಕ ಕಳಕಳಿ ಮೆರೆದಿದ್ದಾರೆ.

ಪೊಲೀಸ್ ಕಾನ್ಸ್​ಟೇಬಲ್​ಗಳಾದ ಶಂಕರ್ ಮತ್ತು ಸತೀಶ್ ನಗರದ ಪಿವಿಎಸ್ ಸರ್ಕಲ್ ಬಳಿ ಹೋಗುತ್ತಿದ್ದ ವೇಳೆ, ಸರ್ಕಲ್​ನಲ್ಲಿ ಇಂಜಿನ್ ಆಯಿಲ್ ಚೆಲ್ಲಿ ಎರಡು ಮೂರು ಬೈಕ್​ಗಳು ಸ್ಕಿಡ್ ಆಗಿ ಬಿದ್ದಿವೆ ಇದರಿಂದಾಗಿ ಮುಂದಿನ ಅಪಾಯವನ್ನರಿತ ಪೊಲೀಸ್ ಕಾನ್ಸ್​ಟೇಬಲ್​ ಗಳಿಬ್ಬರೂ ಸೇರಿಕೊಂಡು ಅಲ್ಲಿಗೆ ಮರಳನ್ನು ತರಿಸಿ ಹಾಕಿ, ಅದನ್ನು ಗುಡಿಸಿ ಆಯಿಲ್ ಹೋಗುವಂತೆ ಮಾಡಿದ್ದಾರೆ‌‌.

ಇವರ ಈ ಕಾರ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅಲ್ಲದೇ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಕುಮಾರ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಸಿಬ್ಬಂದಿಗಳಾದ ಶಂಕರ್ ಮತ್ತು ಸತೀಶ್ ಅವರನ್ನು ತಮ್ಮ ಕಚೇರಿಗೆ ಕರೆಸಿ ಡಿಸಿಪಿ, ಎಸಿಪಿ ಸೇರಿದಂತೆ ತಮ್ಮ ಸಿಬ್ಬಂದಿಗಳ ಸಮ್ಮುಖದಲ್ಲಿ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದ್ದಾರೆ.

- Advertisement -

Related news

error: Content is protected !!