Sunday, May 19, 2024
spot_imgspot_img
spot_imgspot_img

ಮಂಗಳೂರು: ರಿಕ್ಷಾದಲ್ಲಿ ನಿಗೂಢ ಬೆಂಕಿ ಅವಘಡ; ವಿಧಿವಿಜ್ಞಾನ ತಂಡದಿಂದ ಪರಿಶೀಲನೆ

- Advertisement -G L Acharya panikkar
- Advertisement -

ಮಂಗಳೂರು: ನಗರದ ಕಂಕನಾಡಿ ಠಾಣಾ ವ್ಯಾಪ್ತಿಯ ನಾಗುರಿಯಲ್ಲಿ ಶನಿವಾರ ಸಂಜೆ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಪೋಟದಂತೆ ಬೆಂಕಿ ಸಂಭವಿಸಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸ್ಫೊಟಕ್ಕೆ ನಿಖರ ಕಾರಣ ತತ್ ಕ್ಷಣಕ್ಕೆ ತಿಳಿದುಬಂದಿಲ್ಲ. ಪ್ರಯಾಣಿಕ ಸಾಗಿಸುತ್ತಿದ್ದ ಪರಿಕರವೊಂದು ಸ್ಪೋಟಗೊಂಡು ಘಟನೆ ನಡೆದಿದೆ ಎನ್ನಲಾಗಿದ್ದು , ಘಟನೆ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಗಾಯಗೊಂಡವರು ರಿಕ್ಷಾ ಚಾಲಕ ಮತ್ತು ಪ್ರಯಾಣಿಕ ಎಂದು ತಿಳಿದು ಬಂದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ಪೊಲೀಸ್ ಅಧಿಕಾರಿಗಳು, ವಿಧಿವಿಜ್ಞಾನ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ.

ಬಳಿಕ ಮಾತನಾಡಿದ ನಗರ ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್, ನಾಗುರಿಯಿಂದ ಪಂಪ್ ವೆಲ್ ಕಡೆ ತೆರಳುತ್ತಿದ್ದ ಆಟೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಾಗುರಿಯಿಂದ ಹತ್ತಿದ ಪ್ರಯಾಣಿಕನ ಕೈಯಲ್ಲಿದ್ದ ಪ್ಲ್ಯಾಸ್ಟಿಕ್ ಬ್ಯಾಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ತಗುಲಿದ ಪರಿಣಾಮ ಅಟೋ ಒಳಭಾಗ ಸುಟ್ಟು ಹೋಗಿದೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ.

ಬೆಂಕಿ‌ಕಾಣಿಸಿಕೊಂಡಿದೆ ಎಂದು ಅಟೋ ಚಾಲಕ ಹೇಳುತ್ತಿದ್ದು, ಬ್ಲಾಸ್ಟ್ ಆದ ಬಗ್ಗೆ ಪ್ರತ್ಯಕ್ಷ ಸಾಕ್ಷಿಗಳ ಏನು ಹೇಳಿಲ್ಲಘಟನೆ ಬಗ್ಗೆ ಸಮಗ್ರವಾದ ವಿಚಾರಣೆ ನಡೆಸಲಾಗುತ್ತದೆಎಂದು ಹೇಳಿದ್ದಾರೆ.

- Advertisement -

Related news

error: Content is protected !!