Tuesday, June 16, 2026
spot_imgspot_img
spot_imgspot_img

ಮಂಗಳೂರು: ರೌಡಿ ಶೀಟರ್ ರವಿರಾಜ್ ಬಂಗೇರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು : ನಿನ್ನೆ ಬೈಕಂಪಾಡಿಯ ಮೀನಕಳಿಯ ರಸ್ತೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ರೌಡಿ ಶೀಟರ್ ರವಿರಾಜ್ ಬಂಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಮೂರು ವರ್ಷದ ಹಿಂದೆ ನಡೆದ ಸುರತ್ಕಲಿನ ಬಾರೊಂದರ ಮುಂಭಾಗದಲ್ಲಿ ನಡೆದಿದ್ದ ಸಂದೇಶ್‌ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ರವಿರಾಜ್ ನನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತನ್ನ ಸ್ನೇಹಿತರೇ ದಾಳಿ ನಡೆಸಿದ್ದಾರೆ ಎಂದು ಜೀವನ್ಮರಣ ಸ್ಥಿತಿಯಲ್ಲಿದ್ದ ರವಿರಾಜ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನುಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Related news

error: Content is protected !!