Saturday, May 18, 2024
spot_imgspot_img
spot_imgspot_img

ಮಂಗಳೂರು: ಲಾಡ್ಜ್ ನಲ್ಲಿ ಕೂಡಿ ಹಾಕಿ ಅಪ್ರಾಪ್ತೆಯ ಅತ್ಯಾಚಾರ; ಆರೋಪಿಗೆ ಏಳು ವರ್ಷಗಳ ಕಠಿಣ ಸಜೆ ವಿಧಿಸಿದ ನ್ಯಾಯಾಲಯ

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಮಂಗಳೂರು: ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಪ್ರಕರಣದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ ಟಿಎಸ್ಸಿ -1 ನ್ಯಾಯಾಲಯದ ನ್ಯಾಯಾಧೀಶರು ಏಳು ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ . ಶಿಕ್ಷೆಗೊಳಗಾದ ಅಪರಾಧಿ ಮಂಗಳೂರು ತಾಲೂಕು ಕೋಟೆಕಾರು ಗ್ರಾಮದ ದೇರಳಕಟ್ಟೆಯ ನಿವಾಸಿ ಇರ್ಫಾನ್ (28) ಎನ್ನಲಾಗಿದೆ.

vtv vitla

ಘಟನೆಯ ವಿವರ:
ಆರೋಪಿ ಇರ್ಫಾನ್ 2014 ರಲ್ಲಿ ಪಿಯುಸಿ ವಿದ್ಯಾ ರ್ಥಿನಿಯನ್ನು ಪರಿಚಯ ಮಾಡಿಕೊಂಡು ಮೊಬೈಲ್ ನಲ್ಲಿ ಮಾತನಾಡುತ್ತಿದ್ದನು. ಬಳಿಕ ಪ್ರೀತಿ ಮಾಡುತ್ತಿರುವುದಾಗಿಯೂ, ಮದುವೆಯಾಗಬೇಕು ಎಂದು ಒತ್ತಾಯಿಸುತ್ತಿದ್ದನು.

vtv vitla

2014ರ ಆಗಸ್ಟ್ ನಲ್ಲಿ ಪರೀಕ್ಷೆ ಬರೆಯಲೆಂದು ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತೆಯನ್ನು ನಾಟೆಕಲ್ ನಲ್ಲಿ ತಡೆದು ನಿಲ್ಲಿಸಿ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಚಿಕ್ಕಮಗಳೂರಿನ ಲಾಡ್ಜ್ ಗೆ ಕರೆದೊಯ್ದು ಅಲ್ಲಿ ಕೂಡಿ ಹಾಕಿ ಅತ್ಯಾಚಾರವೆಸಗಿದ್ದನು. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆಯನ್ನು ಹಾಕಿದ್ದನು.

ವಿದ್ಯಾರ್ಥಿನಿ ನಾಪತ್ತೆಯಾಗಿದ್ದ ಬಗ್ಗೆ ಆಕೆಯ ಹೆತ್ತವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು, ಬಳಿಕ ಪೊಲೀಸರು ಪತ್ತೆ ಹಚ್ಚಿ ಆರೋಪಿ ಇರ್ಫಾನ್ ನನ್ನು ಬಂಧಿಸಿದ್ದರು. ಆಗಿನ ಉಳ್ಳಾಲ ಇನ್ಸ್ಪೆಕ್ಟರ್ ಸವಿತ್ರ ತೇಜ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು . ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಅವರು ವಿಚಾರಣೆ ನಡೆಸಿ ಈ ಪೂರಕ ಸಾಕ್ಷ್ಯ ಗಳನ್ನು ಪರಿಗಣಿಸಿ ಆರೋಪಿಯ ಅಪರಾಧ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ .

vtv vitla
vtv vitla

ಅಪರಾಧಿಗೆ ಶಿಕ್ಷೆ: ಅಪಹರಣ ಕೃತ್ಯಕ್ಕೆ 3 ವರ್ಷ ಸಜೆ ಮತ್ತು 5,000 ರೂ. ದಂಡ , ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 15 ದಿನ ಹೆಚ್ಚುವರಿ ಸಜೆ, ತಡೆದು ನಿಲ್ಲಿಸಿದ ಕೃತ್ಯಕ್ಕೆ 5 ತಿಂಗಳು ಸಜೆ ಮತ್ತು 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಮತ್ತೆ 15 ದಿನ ಸಜೆ.

ಕೊಲೆ ಬೆದರಿಕೆಯೊಡ್ಡಿರುವುದಕ್ಕೆ 1 ವರ್ಷ ಸಜೆ ಮತ್ತು 2,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 2 ತಿಂಗಳು ಸಜೆ, ಅಪ್ರಾಪ್ತ ವಯಸ್ಕಳ ಮೇಲಿನ ಅತ್ಯಾಚಾರಕ್ಕೆ ಪೋಕ್ಸೋ ಕಾಯ್ದೆಯಡಿ 7 ವರ್ಷ ಸಜೆ ಮತ್ತು 15,000 – ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 2 ತಿಂಗಳ ಸಜೆಯನ್ನು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ ಟಿಎಸ್ಸಿ-1 ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

vtv vitla
vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!