Tuesday, May 7, 2024
spot_imgspot_img
spot_imgspot_img

ಮಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಾಟ; 20.89 ಲಕ್ಷ ರೂ. ಮೌಲ್ಯದ ಸೊತ್ತು ವಶ!

- Advertisement -G L Acharya panikkar
- Advertisement -

ಮಂಗಳೂರು: ದುಬೈನಿಂದ‌ ಆಗಮಿಸಿದ ಪ್ರಯಾಣಿಕನೋರ್ವನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 20.89 ಲಕ್ಷ ರೂ. ಮೌಲ್ಯದ ಚಿನ್ನವನ್ನು ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ವಶಕ್ಕೆ ಪಡೆದಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು ವಿಮಾನ‌ ನಿಲ್ದಾಣದಲ್ಲಿ ಬಂದಿಳಿದ ದುಬೈನ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಕಾಸರಗೋಡು ಮೂಲದ ಪ್ರಯಾಣಿಕನಿಂದ ಈ ಚಿನ್ನವನ್ನು ಪತ್ತೆ ಹಚ್ಚಲಾಗಿದ್ದು ತಪಾಸಣೆ ವೇಳೆ ಆರೋಪಿಯು 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿ ಗಮ್‌ನೊಂದಿಗೆ ಮಿಕ್ಸ್ ಮಾಡಿ ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಸ್ಟಮ್ಸ್‌ನ ಉಪ ಆಯುಕ್ತ ಪ್ರವೀಣ್ ಕಂಡಿ, ಅಧಿಕಾರಿಗಳಾದ ರಾಕೇಶ್‌ಕುಮಾರ್, ವಿಕಾಸ್‌ಕುಮಾರ್, ಬಿಕ್ರಮ್ ಚಕ್ರವರ್ತಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

- Advertisement -

Related news

error: Content is protected !!