Tuesday, July 8, 2025
spot_imgspot_img
spot_imgspot_img

ಮಂಗಳೂರು: ವಿದ್ಯಾರ್ಥಿಗಳಿಗೆ ಪೆ‌ನ್, ಪುಸ್ತಕ ಬದಲು ರೈಫಲ್ ಟ್ರೈನಿಂಗ್..! ಇದು ತಾಲಿಬಾನ್ ಸಂಸ್ಕೃತಿ; ಯು.ಟಿ. ಖಾದರ್

- Advertisement -
- Advertisement -
vtv vitla
vtv vitla

ಮಂಗಳೂರು: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೆ‌ನ್, ಪುಸ್ತಕ ಕೊಡುವ ಬದಲು ರೈಫಲ್ ಟ್ರೈನಿಂಗ್ ಮಾಡಲಾಗಿದೆ. ಶಾಸಕರೇ ಮುಂದೆ ನಿಂತು ಮಾಡಿರೋದು ಸರ್ಕಾರದ ತಾಲಿಬಾನ್ ಸಂಸ್ಕೃತಿಯನ್ನು ತೋರಿಸಿದಂತಾಗಿದೆ ಎಂದು ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಆರೋಪಿಸಿದ್ದಾರೆ.

ಸರ್ಕಾರ ಗೂಂಡಾಗಿರಿ ಮಾಡಲು ಹೊರಗುತ್ತಿಗೆ ಕೊಟ್ಟಂತಿದೆ. ಎನ್ ಸಿಸಿಯಂಥ ಸಂಸ್ಥೆಗಳು ಅಧಿಕೃತ, ಅವರು ದೇಶ ಸೇವೆಗಾಗಿ ತರಬೇತಿ ಕೊಡುತ್ತಾರೆ. ಅದರೆ ಕೊಡಗಿನಲ್ಲಿ ಮಾಡಿದವರು ಯಾರು ಅನ್ನೋದು ಗೊತ್ತಿದೆ. ಇವರ ಉದ್ದೇಶ ಏನು? ಅನುಮತಿ ಯಾರು ಕೊಟ್ಟಿದ್ದು ಎಂಬುದರ ತನಿಖೆ ಆಗಲಿ.ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಒಂದೇ ಒಂದು ಹೈಸ್ಕೂಲ್ ಪ್ರಾರಂಭಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಬಿಡಿ ಅಂಗನವಾಡಿ ಕೂಡ ಹೊಸತಾಗಿ ಆರಂಭಿಸಿಲ್ಲ‌.

ವಿದ್ಯಾಸಂಸ್ಥೆಗಳಲ್ಲಿ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ಕೊಟ್ಟಿರೋದು ಸರ್ಕಾರದ ನಿರ್ಲಕ್ಷ್ಯ. ಗೃಹ ಸಚಿವರು ಮತ್ತು ಶಿಕ್ಷಣ ಸಚಿವರು ಈ ಬಗ್ಗೆ ಜನರಿಗೆ ಉತ್ತರಿಸಲಿ. ಈ ವಿಚಾರದಲ್ಲಿ ಮುಖ್ಯಮಂತ್ರಿ ಕೂಡ ಮೌನವಾಗಿರೋದು ಸರಿಯಲ್ಲ. ಮಕ್ಕಳ ಕೈಗೆ ಪುಸ್ತಕ, ಪೆನ್ ಕೊಡುವ ಬದಲು ಆಯುಧ ಕೊಡುತ್ತಾರ ? ಗನ್ ಹಿಡಿದುಕೊಂಡು ಸುತ್ತಾಡಲಿಕ್ಕೆ ಇದೇನು ಉತ್ತರ ಪ್ರದೇಶವಾ ? ಕಾಂಗ್ರೆಸ್ ಸೇವಾದಳ ಅಥವಾ ಯೂತ್ ಕಾಂಗ್ರೆಸ್ ಮಾಡಿದ್ರೆ ಏನಾಗುತ್ತಿತ್ತು ? ಎಂದವರು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗಳ ಸುರಿಮಳೆಗೈದರು.

ದೇಶದ ಭವಿಷ್ಯ ಮಕ್ಕಳು, ಮಕ್ಕಳಲ್ಲಿ ದ್ವೇಷದ ವಾತಾವರಣ ಬೇಡ. ಹೀಗಾಗಿ ದ್ವೇಷ ಹುಟ್ಟುವ ವಿಚಾರಗಳು ಮಕ್ಕಳಲ್ಲಿ ಬೇಡ ಎಂದು ಅವರು ಹೇಳಿದರು.

- Advertisement -

Related news

error: Content is protected !!