Wednesday, May 15, 2024
spot_imgspot_img
spot_imgspot_img

ಮಂಗಳೂರು: ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣ; ನಿಜಾಂಶ ಬಿಚ್ಚಿಟ್ಟ ಕಮಿಷನರ್ ಎನ್.ಶಶಿಕುಮಾರ್.!!

- Advertisement -G L Acharya panikkar
- Advertisement -

ಮಂಗಳೂರು: ನಗರದ ಪಿಯು ಕಾಲೇಜೊಂದರ ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣದಲ್ಲಿ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದ್ದು, ಒಟ್ಟು ಎಂಟು ವಿದ್ಯಾರ್ಥಿಗಳು ಮತ್ತು ಮೂವರು ವಿದ್ಯಾರ್ಥಿನಿಯರು ಈ ಪ್ರಕರಣದಲ್ಲಿದ್ದಾರೆ. ವಿದ್ಯಾರ್ಥಿನಿ ಜತೆ ಅಶ್ಲೀಲವಾಗಿ ತೊಡಗಿಸಿಕೊಂಡ ವಿಡಿಯೋ ವೈರಲ್​ ಆಗಿದ್ದು, ಸಾರ್ವಜನಿಕವಾಗಿ ಟೀಕೆಗೆ ಗುರಿಯಾಗಿದ್ದಾರೆ.

ವಿಡಿಯೋ ವೈರಲ್​ ಆಗುತ್ತಿದ್ದಂತೆ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಮಂಗಳೂರು ಪೊಲೀಸರು ವಿದ್ಯಾರ್ಥಿಯೊಬ್ಬನನ್ನು ಬಂಧಿಸಿಲಾಗಿದ್ದು. ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಈ ಘಟನೆ ನಡೆದು ನಾಲ್ಕು ತಿಂಗಳಾಗಿದೆ. ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಪ್ರಸಿದ್ಧ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ವಿಡಿಯೋ ಮಾಡಿದ ವಿದ್ಯಾರ್ಥಿ ಇತ್ತೀಚಿಗೆ ತನ್ನ ತರಗತಿಯ ವಾಟ್ಸ್​ಆಯಪ್ ಗ್ರೂಪ್​ಗೆ ವಿಡಿಯೋ ಹಾಕಿದ್ದಾನೆ. ಈ ವಿಡಿಯೋ ಶಿಕ್ಷಕರ ಗಮನಕ್ಕೆ ಬಂದು ಆ ವಿದ್ಯಾರ್ಥಿ ಮತ್ತು ಇತರ ವಿದ್ಯಾರ್ಥಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡಿದ್ದಾರೆ. ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ತನಿಖೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಈ ತಂಡದ ಇಬ್ಬರು ವಿದ್ಯಾರ್ಥಿಗಳು ಬಾವುಟಗುಡ್ಡೆಯಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ರೂಂ ಪಡೆದಿದ್ದರು. ಇಲ್ಲೇ ವಿದ್ಯಾರ್ಥಿಗಳು Truth-Dare ಆಟ ಆಡಿದ್ದಾರೆ. ಈ ಸಂದರ್ಭದಲ್ಲಿ ಆಟದಂತೇ ವಿದ್ಯಾರ್ಥಿಗಳು ಪರಸ್ಪರ ಕಿಸ್ ಮಾಡಿದ್ದಾರೆ. ಅಲ್ಲಿಯೇ ಈ ವಿಡಿಯೋ ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಇನ್ನು ಈ ರೂಂನಲ್ಲಿ ವಿದ್ಯಾರ್ಥಿಗಳು ಮದ್ಯಪಾನ ಸೇರಿ ಮಾದಕ ವಸ್ತು ತೆಗೆದುಕೊಳ್ಳುತ್ತಿದ್ದರು. ಈ ವಿಚಾರ ರೂಂನ ಮಾಲೀಕರಿಗೆ ತಿಳಿದು ವಿದ್ಯಾರ್ಥಿಗಳನ್ನು ಹೊರಗೆ ಹಾಕಿದ್ದರು ಎಂದು ವಿವರಿಸಿದ್ದಾರೆ.

Truth-Dare ಆಟದ ನೆಪದಲ್ಲಿ ಕಿಸ್ಸಿಂಗ್​ ಮಾಡುತ್ತಿರುವ ದೃಶ್ಯವನ್ನು ಸೆರೆಹಿಡಿದ ವಿದ್ಯಾರ್ಥಿಯೇ ಅದನ್ನು ವೈರಲ್ ಮಾಡಿದ್ದಾನೆ. ವಿದ್ಯಾರ್ಥಿನಿಯರ ಪಾಲಕರು ಮತ್ತು ವಿದ್ಯಾರ್ಥಿನಿಯರನ್ನೂ ಠಾಣೆಗೆ ಕರೆಸಿದ್ದೇವೆ. ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಇದಾಗಿದ್ದು, ಈ ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ಪಡೆಯುತ್ತಿದ್ದಾರೆ. ಸದ್ಯ ಈ ಬಗ್ಗೆ ಯಾವುದೇ ಪ್ರಕರಣ ದಾಖಲಿಸಿಲ್ಲ. ಗಂಭೀರ ಪ್ರಕರಣ ಆಗಿರೋದರಿಂದ ತನಿಖೆ ನಡೆಸಿ ಪ್ರಕರಣ ದಾಖಲಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಮಂಗಳೂರು: ವಿದ್ಯಾರ್ಥಿಗಳ ಕಿಸ್ಸಿಂಗ್ ಸ್ಪರ್ಧೆ.!!

- Advertisement -

Related news

error: Content is protected !!