Saturday, June 6, 2026
spot_imgspot_img
spot_imgspot_img

ಮಂಗಳೂರು: ವಿದ್ಯಾರ್ಥಿಗಳ ಕಿಸ್ಸಿಂಗ್ ಸ್ಪರ್ಧೆ.!! ವಿಡೀಯೋ ವೈರಲ್; ವಿದ್ಯಾರ್ಥಿ ವಶಕ್ಕೆ!?

- Advertisement -
- Advertisement -

ಮಂಗಳೂರು : ನಗರದ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್ ನಲ್ಲಿ ತೊಡಗಿದ್ದಲ್ಲದೇ ಅದನ್ನ ವಿಡಿಯೋ ಮಾಡಿ ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದ ವಿದ್ಯಾರ್ಥಿಯನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಇದಾಗಿದ್ದು, ಕಿಸ್ಸಿಂಗ್‌ನಲ್ಲಿ ತೊಡಗಿದ್ದ ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ಪಡೆಯುತ್ತಿದ್ದರು ಎನ್ನಲಾಗಿದೆ. ‌ಕಾಲೇಜು ವಿದ್ಯಾರ್ಥಿಗಳ ಈ ಕಿಸ್ಸಿಂಗ್ ವಿಡಿಯೋ ಫುಲ್ ವೈರಲ್ ಆಗಿದ್ದು, ಕಾಲೇಜು ಯೂನಿಫಾರಂನಲ್ಲೇ ಕಿಸ್ಸಿಂಗ್ ನಲ್ಲಿ ತೊಡಗಿರೋ ಕಾರಣದಿಂದ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಎನ್ನುವುದು ಬೆಳಕಿಗೆ ಬಂದಿದೆ.

ಕಾಲೇಜಿನ ಯೂನಿಫಾರಂ ನಲ್ಲಿರುವ ವಿಧ್ಯಾರ್ಥಿಗಳು “ಟ್ರೂತ್ ಆ್ಯಂಡ್ ಡೇರ್” ಗೇಮ್‍ನ್ನು ಆಡುತ್ತಿದ್ದರು. ಈ ವೇಳೆ ಪಂದ್ಯದ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿ ಚುಂಬಿಸಿದ್ದಾನೆ. ತನ್ನ ಸಹಪಾಠಿಗಳ ಎದುರೇ ಖುಲ್ಲಂ ಖುಲ್ಲಾ ವಿದ್ಯಾರ್ಥಿಗಳು ಚುಂಬಿಸಿದ್ದು, ಈ ದೃಶ್ಯವನ್ನು ಉಳಿದವರು ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಕೆಲ ವಿದ್ಯಾರ್ಥಿಗಳ ಮಧ್ಯೆ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಲಿಪ್ ಕಿಸ್ ಕೊಡ್ತಾ ಇರೋ ವಿಡಿಯೋ ಇದಾಗಿದ್ದು, ಯಾವುದೋ ಖಾಸಗಿ ಕೊಠಡಿಯಲ್ಲಿ ಅಶ್ಲೀಲ ವರ್ತಿಸಿ ವಿಡಿಯೋ ಮಾಡಲಾಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ವಿಡಿಯೋ ಮಾಡಿ ವೈರಲ್ ಮಾಡಿದ ವಿದ್ಯಾರ್ಥಿಯನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ವಿದ್ಯಾರ್ಥಿಯೊಬ್ಬನ ವಶಕ್ಕೆ ಪಡೆದು ಮಂಗಳೂರು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಕರಣ ಸಂಬಂಧ ಕಾನೂನು ತಜ್ಞರ ಸಲಹೆ ಪಡೆದ ಕ್ರಮಕ್ಕೆ ‌ಮುಂದಾಗಿದ್ದಾರೆ.

- Advertisement -

Related news

error: Content is protected !!