Friday, March 29, 2024
spot_imgspot_img
spot_imgspot_img

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಿರುಕುಳ ವಿಚಾರವಾಗಿ ಜಿಲ್ಲಾಧಿಕಾರಿಯನ್ನು ಭೇಟಿಯಾದ SDPI ನಿಯೋಗ

- Advertisement -G L Acharya panikkar
- Advertisement -
vtv vitla
vtv vitla

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಅಲ್ಲಿನ ಸಿಬ್ಬಂದಿಗಳು ಮತ್ತು ಕಸ್ಟಮ್ಸ್, ಎಮಿಗ್ರೇಷನ್ , ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಯಾಣಿಕರೊಂದಿಗೆ ದುರಹಂಕಾರ,ಮತ್ತು ಸರ್ವಾಧಿಕಾರಿ ಗಳಂತೆ ವರ್ತಿಸುವುದು,

ಕ್ಷುಲ್ಲಕ ಕಾರಣಗಳನ್ನು ನೀಡಿ ವಿದೇಶಿ ಪ್ರವಾಸಕೈಗೊಳ್ಳುವ ಅನಿವಾಸಿಗಳ ಪ್ರಯಾಣವನ್ನು ಮೊಟಕುಗೊಳಿಸಿ ಹಿಂದಿರುಗಿಸುವುದು, ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಕಸ್ಟಮ್ಸ್ ಹೆಸರಲ್ಲಿ ದುಬಾರಿ ದಂಡ ವಿದಿಸುವುದು , ಸೇರಿದಂತೆ ಹಲವು ರೀತಿಯ ಕಿರುಕುಳವನ್ನು ನೀಡುವ ಬಗ್ಗೆ ನೂರಾರು ಸಂಖ್ಯೆಯ ಪ್ರಯಾಣಿಕರು SDPI ಪಕ್ಷದ ನಾಯಕರ, ಕಾರ್ಯಕರ್ತರ ಬಳಿ ತಮ್ಮ ಅಳಲನ್ನು ತೋಡಿಕೊಂಡರು.

vtv vitla
vtv vitla

ಇದನ್ನು ಗಂಬೀರವಾಗಿ ಪರಿಗಣಿಸಿದ ಪಕ್ಷವು ಈಗಾಗಲೇ ವಿಮಾನ ನಿಲ್ದಾಣದ ಹಲವಾರು ಇಲಾಖೆಗಳ ಅಧಿಕಾರಿಗಳನ್ನು ಭೇಟಿಯಾಗಿ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ ,ಅದರ ಮುಂದುವರಿದ ಬಾಗವಾಗಿ ಇಂದು SDPI ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ನೇತ್ರತ್ವದ ನಿಯೋಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾಕ್ಟರ್ ರಾಜೇಂದ್ರ ಕೆ ವಿ ಯವರನ್ನು ಬೇಟಿಯಾಗಿ ಈ ವಿಚಾರವನ್ನು ಅವರ ಗಮನಕ್ಕೆ ತಂದು ಈ ಬಗ್ಗೆ ವರದಿ ತರಿಸಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು .

ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಪ್ರಯಾಣಿಕರಿಗೆ ನಿರಾಳವಾಗಿ ಪ್ರಯಾಣಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ವಿಮಾನ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತನಾಡಿ ಸೂಕ್ತ ವ್ಯವಸ್ಥೆ ಕಲ್ಪಿಸಲಿದೆ ಎಂದು ನಿಯೋಗಕ್ಕೆ ಭರವಸೆ ನೀಡಿದರು.

ಜಿಲ್ಲಾಧಿಕಾರಿಯನ್ನು ಬೇಟಿ ನೀಡಿದ ನಿಯೋಗದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಮುನೀಬ್ ಬೆಂಗರೆ , ಜಿಲ್ಲಾ ಕಾರ್ಯದರ್ಶಿ ಗಳಾದ ಅಕ್ಬರ್ ಬೆಳ್ತಂಗಡಿ, ಶಾಕಿರ್ ಅಳಕೆಮಜಲು, ಉಳ್ಳಾಲ ಕ್ಷೇತ್ರದ ಅದ್ಯಕ್ಷರಾದ ಇರ್ಶಾದ್ ಅಜ್ಜಿನಡ್ಕ,ಕ್ಷೇತ್ರ ಕಾರ್ಯದರ್ಶಿ ಝಾಹಿದ್ ಮಲಾರ್ ಹಾಗೂ ಇತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!