- Advertisement -
- Advertisement -
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಬಂಟ್ವಾಳ ಮೂಲದ ಪ್ರಯಾಣಿಕನೊಬ್ಬ ದುಬೈನಿಂದ ಚಿನ್ನವನ್ನು ಪೌಡರ್ ರೂಪದಲ್ಲಿ ಅಂಡಾಕಾರದ ಪ್ಯಾಕೆಟ್‌ಗಳಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಆರೋಪಿ 45,83,160 ರೂ. ಮೌಲ್ಯದ 24 ಕ್ಯಾರೆಟ್‌ನ 878 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದು, ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

- Advertisement -