Sunday, May 19, 2024
spot_imgspot_img
spot_imgspot_img

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; ಬರೋಬ್ಬರಿ ೨ ಕೋಟಿ ಮೌಲ್ಯದ ಚಿನ್ನ ವಶಕ್ಕೆ

- Advertisement -G L Acharya panikkar
- Advertisement -

ಮಂಗಳೂರು: ದುಬೈನಿಂದ ಟ್ರಾಲಿ ಬ್ಯಾಗ್ ಗಳಲ್ಲಿ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಮಂಗಳೂರು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬರೊಬ್ಬರಿ 3.895 ಕೆಜಿ ತೂಕದ ರೋಢಿಯಮ್ ಲೇಪಿತ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ವರು ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು. ಸಾಗಾಟಗಾರರಿಂದ ೨ ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ದುಬೈನಿಂದ ಬಂದಿದ್ದ ನಾಲ್ವರನ್ನು ಏರ್‌ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರು 2,01,37.250 ಮೌಲ್ಯದ 3.895 ಕೆಜಿ ತೂಕದ ಚಿನ್ನದ ಪಟ್ಟಿಗಳನ್ನು ಅವರ ಟ್ರಾಲಿ ಬ್ಯಾಗ್‌ಗಳಲ್ಲಿ ಬಚ್ಚಿಟ್ಟಿರುವುದು ತನಿಖೆ ವೇಳೆ ಪತ್ತೆ ಮಾಡಲಾಗಿದೆ.

- Advertisement -

Related news

error: Content is protected !!