Sunday, April 28, 2024
spot_imgspot_img
spot_imgspot_img

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ; 1.08 ಕೋಟಿ ಮೌಲ್ಯದ ಚಿನ್ನ ವಶ

- Advertisement -G L Acharya panikkar
- Advertisement -

ಮಂಗಳೂರು : ದುಬೈ ಹಾಗೂ ಅಬುದಾಭಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1,08,28,240 ರೂ.ಮೌಲ್ಯದ 1,913 ಗ್ರಾಂ ಚಿನ್ನ ಅಕ್ರಮ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.

ಫೆ.16ರಿಂದ 28ರ ಮಧ್ಯೆ ಮಹಿಳೆ ಹಾಗೂ ಆರು ಮಂದಿ ಪುರುಷ ಪ್ರಯಾಣಿಕರನ್ನು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವೇಳೆ ಪತ್ತೆ ಹಚ್ಚಲಾಗಿದೆ. ಹಾಗೂ ಆರೋಪಿಗಳು ಚಿನ್ನವನ್ನು ಪೇಸ್ಟ್ ಮಾಡಿ ಟಿ ಶರ್ಟ್‌ನಲ್ಲಿ ಅಳವಡಿಸಿ ಮತ್ತು ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಾಟ ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಕ್ರಮ ಚಿನ್ನ ಸಾಗಾಟ ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!