Saturday, July 5, 2025
spot_imgspot_img
spot_imgspot_img

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ

- Advertisement -
- Advertisement -

ಮಂಗಳೂರು: ದುಬೈಯಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯಿಂದ 29.12 ಲಕ್ಷ ರೂ. ಮೌಲ್ಯದ 560 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಶನಿವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿದ್ದಾರೆ.

ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈತ ಭಟ್ಕಳದವನಾಗಿದ್ದು, 24 ಕ್ಯಾರೆಟ್‌‌ ಶುದ್ದ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಗುಳಿಗೆಗಳ ಆಕಾರದಲ್ಲಿ ಪ್ಯಾಕ್‌ ಮಾಡಿ ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿದ್ದ. ಪರಿಶೀಲನೆ ವೇಳೆ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ ಎಂದು ಕಸ್ಟಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!