Thursday, April 25, 2024
spot_imgspot_img
spot_imgspot_img

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ವಿಡಿಯೋ ಗೇಮ್ ಆಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಅಮಾನತು.!

- Advertisement -G L Acharya panikkar
- Advertisement -

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ನೀಡುವ ಬದಲು ವಿಡಿಯೋ ಗೇಮ್ ಆಡುತ್ತಿದ್ದ ಖಾಸಗಿ ಕಾಲೇಜಿನ ಸ್ನಾತಕೋತ್ತರ ವೈದ್ಯಕೀಯ ವಿಧ್ಯಾರ್ಥಿಯನ್ನು ಅಮಾನತುಗೊಳಿಸಲಾಗಿದೆ.

ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಯೊಬ್ಬನಿಗೆ ಚಿಕಿತ್ಸೆ ನೀಡುವುದು ಬಿಟ್ಟು ವೈದ್ಯರು ವಿಡಿಯೋ ಗೇಮ್ ನಲ್ಲಿ ತಲ್ಲೀನರಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದೀಗ ಘಟನೆ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಸರ್ಜನ್ ಡಾ.ಸದಾಶಿವ, ವೈದ್ಯ ವಿದ್ಯಾರ್ಥಿಯು ಜನವರಿ 24ರಂದು ವೆನ್ಲಾಕ್ ಆಸ್ಪತ್ರೆಯ ಕ್ಯಾಶುವಾಲಿಟಿ ಬ್ಲಾಕ್‌ನಲ್ಲಿ ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿಡಿಯೋ ಗೇಮ್ ಆಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯ ಕುರಿತು ತನಿಖೆ ನಡೆಸಿದಾಗ ಅವರು ನಿಜವಾಗಿಯೂ ವೀಡಿಯೊಗೇಮ್ ಆಡುತ್ತಿದ್ದರು ಎಂದು ಕಂಡುಬಂದಿದೆ. ನಂತರ ಅವರನ್ನು ಕಾಲೇಜ್ ನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಂಗಳೂರು: ಸರಕಾರಿ ಆಸ್ಪತ್ರೆಯಲ್ಲಿ ರೋಗಿ ನರಳಾಡುತ್ತಿದ್ದರೂ ಸಿಬ್ಬಂದಿಗಳು ವೀಡಿಯೋ ಗೇಮ್‌‌ನಲ್ಲಿ ಬ್ಯುಸಿ …!!

vtv vitla
vtv vitla
suvarna gold
- Advertisement -

Related news

error: Content is protected !!