Tuesday, July 21, 2026
spot_imgspot_img
spot_imgspot_img

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ ಹೆಗ್ಗಡೆ ಹಾಗೂ ತುಳು ಸಿನಿಮಾ ನಟ ದೇವದಾಸ್ ಕಾಪಿಕಾಡ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

- Advertisement -
- Advertisement -

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ ಹೆಗ್ಗಡೆ ಅವರಿಗೆ ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಲಭಿಸಿದೆ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಹಾಗೂ ಅವರ ಸಮಾಜಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ.

vtv vitla
vtv vitla

ಇನ್ನುಳಿದಂತೆ ಸಾಹಿತ್ಯ ಹಾಗೂ ಸಮಾಜಸೇವೆಗಾಗಿ ಹರಿಕೃಷ್ಣ ಪುನರೂರು ಹಾಗೂ ತುಳು ರಂಗಭೂಮಿ ಹಾಗೂ ಸಿನಿಮಾ ಕ್ಷೇತ್ರದಲ್ಲಿನ ಸಾಧನೆಗಾಗಿ ದೇವಿದಾಸ್ ಕಾಪಿಕ್ಕಾಡ್ ಅವರಿಗೂ ಗೌರವ ಡಾಕ್ಟರೇಟ್ ಗೌರವ ಲಭಿಸಿದೆ.

ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವ ಸಮಾರಂಭದಲ್ಲಿ ಮೂವರಿಗೆ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.

ಇವರ ಜೊತೆಗೆ ಶಿಕ್ಷಣ ಹಾಗೂ ಸಾಮಾಜಿಕ ಸೇವೆಗಾಗಿ ಶ್ರೀಮತಿ ಹೇಮಾವತಿಯವರು, ಹಾಗೂ ಸಾಮಾಜಿಕ ಸೇವೆ ಹಾಗೂ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಹರಿಕೃಷ್ಣ ಪುನರೂರು ಅವರನ್ನು ಆಯ್ಕೆ ಮಾಡಲಾಗಿದೆ.

vtv vitla
vtv vitla
- Advertisement -

Related news

error: Content is protected !!