Friday, May 10, 2024
spot_imgspot_img
spot_imgspot_img

ಮಂಗಳೂರು: ಸರಕಾರಿ ಆಸ್ಪತ್ರೆಯಲ್ಲಿ ರೋಗಿ ನರಳಾಡುತ್ತಿದ್ದರೂ ಸಿಬ್ಬಂದಿಗಳು ವೀಡಿಯೋ ಗೇಮ್‌‌ನಲ್ಲಿ ಬ್ಯುಸಿ …!!

- Advertisement -G L Acharya panikkar
- Advertisement -

ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಐಸಿಯು ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳಿಗೆ ಚಿಕಿತ್ಸೆ ನೀಡುವ ಬದಲು ತಮ್ಮ ಕಂಪ್ಯೂಟರ್‌ನಲ್ಲಿ ಆಟವಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಗ್ಗದ ವಿಜಯ್ (40) ಎಂಬ ವ್ಯಕ್ತಿಗೆ ಅಧಿಕ ರಕ್ತದೊತ್ತಡದಿಂದ ಬಿದ್ದು ತಲೆಗೆ ಪೆಟ್ಟು ಬಿದ್ದಿದ್ದು, ಜನವರಿ 22 ರಂದು ತಕ್ಷಣ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ರೋಗಿಯು ಆಸ್ಪತ್ರೆಗೆ ತಲುಪಿದಾಗ ಆತನಿಗೆ ಚಿಕಿತ್ಸೆ ನೀಡುವ ಬದಲು, ಐಸಿಯು ವೈದ್ಯರು ಮತ್ತು ಇತರ ಸಿಬ್ಬಂದಿ, ತಮ್ಮ ಕಂಪ್ಯೂಟರ್‌ನಲ್ಲಿ ಆಟವಾಡುತ್ತಿದ್ದರು ಎಂದು ಹೇಳಲಾಗಿದೆ.

ರೋಗಿಯ ಆಪ್ತರು ವೈದ್ಯರು ಮತ್ತು ಸಿಬ್ಬಂದಿಗೆ ಕರೆ ಮಾಡಿ ರೋಗಿಗೆ ಚಿಕಿತ್ಸೆ ನೀಡುವಂತೆ ಮನವಿ ಮಾಡಿದರೂ ಸ್ಪಂದಿಸಲಿಲ್ಲ ಎನ್ನಲಾಗಿದೆ. ರೋಗಿಯನ್ನು ಯಾವುದಾದರೂ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕೆಂದು ವೈದ್ಯರು ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ. ರೋಗಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಕರ್ತವ್ಯ ಲೋಪವೆಸಗಿರುವ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರೋಗಿಯ ಸಂಬಂಧಿಕರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!