Saturday, June 13, 2026
spot_imgspot_img
spot_imgspot_img

ಮಂಗಳೂರು: ಸರಣಿ ಅಪಘಾತ; ಆಟೋ-ಕಾರಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ..!

- Advertisement -
- Advertisement -
vtv vitla

ಮಂಗಳೂರು: ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಕಾರು ಚಾಲಕನ ನಿಯಂತ್ರಣ ತಪ್ಪಿ ಆಟೋ ಹಾಗೂ ಕಾರಿಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾದ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ.

ಸ್ಥಳೀಯರ ಮಾಹಿತಿ ಪ್ರಕಾರ ಇಳಿಜಾರಿನಲ್ಲಿ ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ಚಪ್ಪಲ್ ಎಕ್ಸೆಲೇಟರ್ ಪೆಡಲ್ ಮಧ್ಯೆ ಸಿಕ್ಕಿಹಾಕಿಕೊಂಡು ಕಾರಿನ ವೇಗ ಹೆಚ್ಚಾಗಿ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಆಟೋ ಹಾಗೂ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಕಾರು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದ್ದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

- Advertisement -

Related news

error: Content is protected !!