Sunday, June 14, 2026
spot_imgspot_img
spot_imgspot_img

ಮಂಗಳೂರು: ಸಿಮೆಂಟ್ ಮಿಕ್ಸರ್ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ: ದ್ವಿಚಕ್ರ ವಾಹನ ಸಾವಾರೆ ಮೃತ್ಯು

- Advertisement -
- Advertisement -

ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿಯ ಮರೋಳಿ ಎಂಬಲ್ಲಿ ಭೀಕರ ಅಪಘಾತ ನಡೆದಿದ್ದು, ಸಿಮೆಂಟ್ ಮಿಕ್ಸರ್ ಲಾರಿ ಸ್ಕೂಟರ್‌ಗೆ ಡಿಕ್ಕಿಯಾಗಿ, ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯನ್ನು ಪೂರ್ಣಿಮಾ(34) ಎಂದು ಗುರುತಿಸಲಾಗಿದೆ.

ಇವರು ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿಯಾಗಿದ್ದು ಕೆಲಸ ಮುಗಿಸಿ ಸಂಜೆ ವೇಳೆಗೆ ತನ್ನ ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಪೂರ್ಣಿಮಾ ಕಾವೂರು ನಿವಾಸಿಯಾಗಿದ್ದು ಪಡೀಲಿನಿಂದ ಮರೋಳಿ ದಾರಿಯಾಗಿ ಮನೆಯತ್ತ ಸಾಗುತ್ತಿದ್ದರು. ಈ ವೇಳೆ ಸಿಮೆಂಟ್ ಮಿಕ್ಸಿಂಗ್ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಪೂರ್ಣಿಮಾ ಅವರು ಡಾಮರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮೊದಲೇ ಸಾವನ್ನಪ್ಪಿದ್ದಾರೆ. ‌

ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!