Wednesday, May 1, 2024
spot_imgspot_img
spot_imgspot_img

ಮಂಗಳೂರು: ‘ಹರ್ ಘರ್ ತಿರಂಗಾ’ ಅಭಿಯಾನದಡಿ ದ.ಕ ಜಿಲ್ಲೆಗೆ 6 ಲಕ್ಷ ಧ್ವಜ: ಮಾರಾಟಕ್ಕೆ ಚಾಲನೆ ನೀಡಿದ ಸಚಿವ

- Advertisement -G L Acharya panikkar
- Advertisement -

ಮಂಗಳೂರು: ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮನೆ ಮನೆಗಳ ಮೇಲೆ ಧ್ವಜಾರೋಹಣ ಹಾರಿಸಲು ಅನುವಾಗುವಂತೆ ಜಿಲ್ಲಾ ಆಡಳಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಲಕ್ಷ ಧ್ವಜಗಳ ಮಾರಾಟಕ್ಕೆ ವ್ಯವಸ್ಥೆ ಮಾಡಿದೆ. ಇದೇ 13ರಿಂದ 15ರವರೆಗೆ ಸಾರ್ವಜನಿಕರು ತಮ್ಮ ಮನೆ, ವ್ಯಾಪಾರದ ಸ್ಥಳಗಳ ಮೇಲೆ ಧ್ವಜಾರೋಹಣ ಮಾಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್‌ ಮನವಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಂಗಳೂರು ತಾಲ್ಲೂಕು ಪಂಚಾಯಿತಿ, ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಹಮ್ಮಿಕೊಂಡಿರುವ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ರಾಷ್ಟ್ರಧ್ವಜ ಮಾರಾಟ ಮಳಿಗೆಗೆ ಚಾಲನೆ ನೀಡಿ ಮಾತನಾಡಿದರು.

ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯಿತಿ ಒಕ್ಕೂಟ, ರಾಯಿ ಗ್ರಾಮ‌ ಪಂಚಾಯಿತಿ ಸದಸ್ಯರು ತಯಾರಿಸಿದ ರಾಷ್ಟ್ರಧ್ವಜಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವರು ಚಾಲನೆ ನೀಡಿದರು.

ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ‌ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್ ಇದ್ದರು.

- Advertisement -

Related news

error: Content is protected !!