- Advertisement -
- Advertisement -

ಬಜಪೆ: ಹಿಂದೂ ಸಂಘಟನೆಗಳ ನಾಲ್ವರು ಕಾರ್ಯಕರ್ತರ ಮೇಲೆ ಬಜಪೆ ಪೊಲೀಸರು ಹಲ್ಲೆ ನಡೆಸಿ ಅವರ ಮನೆಯ ಮಹಿಳೆಯರ ಬಗ್ಗೆ ಅಸಭ್ಯ ಮಾತುಗಳನ್ನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಪೊಲೀಸ್ ಠಾಣೆಯ ಇನ್ಸೆಕ್ಟರ್ ಸಂದೇಶ್ ಪಿ.ಜಿ ಸಹಿತ ಮೂವರು ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಠಾಣೆಯ ಇನ್ಸ್ ಪೆಕ್ಟರ್ ಸಹಿತ ಐವರು ಪೊಲೀಸರನ್ನು ತಕ್ಷಣ ಅಮಾನತುಗೊಳಿಸುದರ ಜೊತೆಗೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಆರೆಸ್ಸೆಸ್ ಹಾಗೂ ಇತರ ಹಿಂದೂ ಪರ ಸಂಘಟನೆಗಳು ನಿನ್ನೆ ಸಂಜೆ ಬಜ್ಪೆ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಿದ್ದರು.


- Advertisement -








