Monday, May 13, 2024
spot_imgspot_img
spot_imgspot_img

ಮಂಗಳೂರು: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಗೆ ತಡೆ ಆರೋಪ; ಬಂದರು ಠಾಣೆಯಲ್ಲಿ ದೂರು ದಾಖಲು

- Advertisement -G L Acharya panikkar
- Advertisement -

ಮಂಗಳೂರು: ನಗರದ ಕಾರ್ ಸ್ಟ್ರೀಟ್ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಇತರ ವಿದ್ಯಾರ್ಥಿಗಳಿಂದ ತಡೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ಬಂದರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ನಗರ ಕಮಿಷನರ್ ಶಶಿಕುಮಾರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

vtv vitla
vtv vitla

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ವಿದ್ಯಾರ್ಥಿಗಳು ತಡೆದಿದ್ದಾರೆ ಎನ್ನುವ ಆರೋಪವನ್ನು ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಕೂಡ ನಡೆದಿದೆ.

ಈ ಬಗ್ಗೆ ಬಂದರು ಠಾಣೆಗೆ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದಾಳೆ. ಆಕೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಕೂಲಂಕುಶವಾಗಿ ತನಿಖೆ ನಡೆಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!