Sunday, May 5, 2024
spot_imgspot_img
spot_imgspot_img

ಮಂಗಳೂರು: ಹಿಜಾಬ್ ವಿವಾದ..! ಸುದ್ದಿಗೋಷ್ಟಿ ನಡೆಸಿ ಪ್ರಶ್ನೆ ಮಾಡಿದ್ದ 6 ವಿದ್ಯಾರ್ಥಿನಿಯರಿಗೆ ಸಂಕಟ; ವಿದ್ಯಾರ್ಥಿನಿಯರಿಗೆ ನೊಟೀಸ್ – ಅಮಾನತು ಕ್ರಮ ಸಾಧ್ಯತೆ

- Advertisement -G L Acharya panikkar
- Advertisement -

ಮಂಗಳೂರು: ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಹಿಜಾಬ್ ನಿಷೇಧಿಸಿರುವುದನ್ನು ವಿರೋಧಿಸಿ ಕಾಲೇಜು ಆಡಳಿತದ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಪ್ರಶ್ನೆ ಮಾಡಿದ ಆರು ಮಂದಿ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲೆ ಅನಸೂಯ ರೈ ಶೋಕಾಸ್ ನೋಟೀಸ್ ನೀಡಿದ್ದಾರೆ.

ಕಾಲೇಜಿನಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡದಿರುವ ಕಾಲೇಜು ಆಡಳಿತ ಮಂಡಳಿ ನಿರ್ಣಯದ ವಿರುದ್ದ ಜೂನ್ 4ರಂದು ಆರು ಮಂದಿ ವಿದ್ಯಾರ್ಥಿನಿಯರು ಸುದ್ದಿಗೋಷ್ಠಿ ನಡೆಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ್ದ ವಿದ್ಯಾರ್ಥಿನಿಯರು ಕಾಲೇಜಿನ ಆಡಳಿತ ಎಬಿವಿಪಿ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದು ಹಿಜಾಬ್ ನಿಷೇಧ ನಿರ್ಣಯ ತೆಗೆದುಕೊಂಡಿದೆ ಎಂದು ಆರೋಪಿಸಿದ್ದರು.

ಇದೇ ವಿಚಾರದಲ್ಲಿ ನೋಟೀಸ್ ನೀಡಲಾಗಿದ್ದು, ನೀವು ಹೊರಗಿನ ಶಕ್ತಿಗಳ ಬೆಂಬಲದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಿರಿ. ಕಾಲೇಜಿನ ಆಡಳಿತ ಮತ್ತು ಪ್ರಾಂಶುಪಾಲರ ಬಗ್ಗೆ ಪ್ರಶ್ನೆ ಮಾಡಿದ್ದರಿಂದ ಕಾಲೇಜಿನ ಪ್ರತಿಷ್ಠೆಗೆ ಧಕ್ಕೆಯಾಗಿದೆ. ಈ ಬಗ್ಗೆ ನಿಮ್ಮ ವಿರುದ್ಧ ಶಿಸ್ತು ಕ್ರಮ ಯಾಗೆ ತಗೊಳ್ಳಬಾರದು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಮೂರು ದಿನದೊಳಗೆ ಉತ್ತರಿಸುವಂತೆ ಶೋಕಾಸ್ ನೋಟೀಸ್ ನಲ್ಲಿ ತಿಳಿಸಲಾಗಿದೆ.

ಗೌಸಿಯಾ ಸೇರಿದಂತೆ ತರಗತಿಯೊಳಗೆ ಹಿಜಾಬ್‌ ಧರಿಸಿ ನಿಯಮ ಉಲ್ಲಂಘನೆ ಮಾಡಿದ ಎಲ್ಲಾ ಮುಸ್ಲಿಂ ವಿದ್ಯಾರ್ಥಿನಿಯರಿಗೂ ನೊಟೀಸ್ ನೀಡಲಾಗಿದೆ. ಮುಂದೆ ಇಂತಹ ಘಟನೆ ಮರುಕಳಿಸಿದ್ದಲ್ಲಿ ಕಾಲೇಜಿನಿಂದ ಅಮಾನತು ಮಾಡಲಾಗುವುದು ಎಂದು ನೊಟೀಸ್‌ನಲ್ಲಿ ಸೂಚನೆ ನೀಡಲಾಗಿದೆ.

- Advertisement -

Related news

error: Content is protected !!