Thursday, May 2, 2024
spot_imgspot_img
spot_imgspot_img

ಮಂಗಳೂರು: ಹೂವಿನ ಅಂಗಡಿಯ ಶಟರ್‌ ಮುರಿದ ಚೋರರು; 9 ಲಕ್ಷ ನಗದು – ಸಿಸಿಟಿವಿ ಡಿವಿಆರ್ ಕಳವು

- Advertisement -G L Acharya panikkar
- Advertisement -

ಮಂಗಳೂರು: ರಾತ್ರೋರಾತ್ರಿ ಹೂವಿನ ಅಂಗಡಿಗೆ ನುಗ್ಗಿದ ಕಳ್ಳರು ಡ್ರವರ್‌ನಲ್ಲಿದ್ದ ಲಕ್ಷಾಂತರ ಹಣವನ್ನು ಕದ್ದೊಯ್ದ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪಾಡ್ ಅಪ್ಸರಾ ಚೇಂಬರ್ಸ್‌ ಕಟ್ಟಡದ ನೆಲ ಮಹಡಿಯಲ್ಲಿರುವ ಹೂವಿನ ಅಂಗಡಿಯಿಂದ ಬುಧವಾರ ರಾತ್ರಿ 9 ಲಕ್ಷ ರೂ. ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಕನಾಡಿ ನಿವಾಸಿ ಉಮರಬ್ಬ ಅವರಿಗೆ ಸೇರಿದ ಹೂವಿನ ಅಂಗಡಿಯಲ್ಲಿ ಕಳ್ಳತನವಾಗಿದೆ. ಹೂವಿನ ರೈತರಿಗೆ ಕೊಡಬೇಕಾದ ಸುಮಾರು 9 ಲಕ್ಷ ರೂ. ಹಣವನ್ನು ಅಂಗಡಿಯ ಟೇಬಲ್‌ನ ಡ್ರಾವರ್‌ನಲ್ಲಿ ಇಟ್ಟು ಲಾಕ್ ಮಾಡಿ ಸಂಜೆ 6 ಗಂಟೆಗೆ ಆಂಗಡಿ ಮುಚ್ಚಿ ತೆರೆಳಿದ್ದರು. ಗುರುವಾರ ಬೆಳಗ್ಗೆ 6 ಗಂಟೆಗೆ ಅವರ ಮಗ ರಿಯಾಜ್ ಅಂಗಡಿ ತೆರೆಯಲು ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಅಂಗಡಿಯ ಮುಖ್ಯ ದ್ವಾರದ ಶಟರ್‌ನ ಸೆಂಟರ್ ಲಾಕ್ ಮುರಿದಿರುವುದು ಕಂಡುಬಂದಿತ್ತು. ತತ್‌ಕ್ಷಣ ಅವರು ಉಮರಬ್ಬ ಅವರಿಗೆ ಕರೆ ಮಾಡಿ ತಿಳಿಸಿದ್ದು, ಅವರು ಬಂದು ಅಂಗಡಿಯ ಶಟರ್ ಬಾಗಿಲನ್ನು ಮೇಲಕ್ಕೆತ್ತಿ ಒಳಗಡೆ ನೋಡಿದಾಗ ಟೇಬಲ್‌ನ ಡ್ರಾವರ್ ಲಾಕ್ ಮುರಿದು ಅದರಲ್ಲಿದ್ದ 9 ಲಕ್ಷ ರೂ. ಕಳವು ಮಾಡಿರುವುದು ಕಂಡುಬಂದಿದೆ. ಅಂತೆಯೇ ಸಿಸಿ ಕೆಮರಾ ಡಿವಿಆರ್ ಮತ್ತು ಮಾನಿಟರ್ ಇರಿಸಿದ ಬಾಕ್ಸ್ ಅನ್ನು ತೆರೆದು ಡಿವಿಆರ್ ಅನ್ನು ತೆಗೆದುಕೊಂಡು ಹೋಗಿದ್ದಾರೆ.

ಚಿತ್ರದುರ್ಗ, ತುಮಕೂರು ಕಡೆಗಳಿಂದ ಹೂವಿನ ರೈತರು ಬರುವವರಿದ್ದುದರಿಂದ ಸುಮಾರು 1 ತಿಂಗಳಿನಿಂದ ಅವರಿಗಾಗಿ ನಗದನ್ನು ಇಟ್ಟುಕೊಂಡು ಕಾಯುತ್ತಿದ್ದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!