- Advertisement -
- Advertisement -

ಮಂಗಳೂರು: ನಗರದ ಹೊಯ್ಗೆಬಜಾರ್‌ನ ಸಮುದ್ರದ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.

ದಕ್ಕೆಗೆ ತೆರಳುತ್ತಿದ್ದ ಸ್ಥಳೀಯ ಮೀನುಗಾರರು ಸಮುದ್ರದ ದಡದಲ್ಲಿ ಯುವತಿಯ ಮೃತ ದೇಹ ನೋಡಿದ್ದಾರೆ. ಕೂಡಲೇ ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಸರಕಾರಿ ಜಿಲ್ಲಾಸ್ಪತ್ರೆ ವೆನ್ಲಾಕ್‌ನ ಶವಾಗಾರಕ್ಕೆ ತಂದಿದ್ದಾರೆ.

ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




- Advertisement -