Saturday, June 13, 2026
spot_imgspot_img
spot_imgspot_img

ಮಂಗಳೂರು: ದುಬೈಯಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಟ; 11.78 ಲಕ್ಷ ಮೌಲ್ಯದ ಚಿನ್ನ ವಶ

- Advertisement -
- Advertisement -

ಮಂಗಳೂರು: ದುಬೈಯಿಂದ ಭಾರತಕ್ಕೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಭಟ್ಕಳ ಮೂಲದ ಪ್ರಯಾಣಿಕ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 24 ಕ್ಯಾರೆಟ್ ನ 11.78 ಲಕ್ಷ ರೂ. ಮೌಲ್ಯದ 224 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಟ್ಕಳ ಮೂಲದ ಪ್ರಯಾಣಿಕ ಅಂಡಾಕಾರದ ವಸ್ತುವಿನಲ್ಲಿ ಚಿನ್ನವನ್ನು ಅಕ್ರಮವಾಗಿ ತನ್ನ ದೇಹದ ಒಳಗೆ ಒಟ್ಟುಕೊಂಡು ಸಾಗಿಸುತ್ತಿದ್ದ ವೇಳೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!