Sunday, May 19, 2024
spot_imgspot_img
spot_imgspot_img

ಮಂಗಳೂರು: 237 ಪಟ್ಟು ಹೆಚ್ಚು ಆಸ್ತಿ ಹೊಂದಿದ ಪಾಲಿಕೆ ಹಿರಿಯ ನೈರ್ಮಲ್ಯ ನಿರೀಕ್ಷಕ..! 9 ವರ್ಷಗಳ ನಂತರ ಆರೋಪ ಸಾಬೀತು; 1 ಕೋಟಿ ರೂ ದಂಡ

- Advertisement -G L Acharya panikkar
- Advertisement -

ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ತನ್ನ ಆದಾಯಕ್ಕಿಂತ ಬರೋಬ್ಬರಿ ಶೇ 237.5ರಷ್ಟು ಹೆಚ್ಚು ಆಸ್ತಿ ಹೊಂದಿದ ಪ್ರಕರಣ ಸಾಬೀತಾಗಿ ಕೋರ್ಟ್‌ ಶಿಕ್ಷೆಯನ್ನು ಪ್ರಕಟಿಸಿದೆ. ಮನಪಾ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗೂಳಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪ ಸಾಬೀತಾಗಿದೆ. ಅವರಿಗೆ ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ ಸಜೆ ಹಾಗೂ ₹ 1 ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ.

ದಂಡ ಕಟ್ಟಲು ಶಿವಲಿಂಗ ವಿಫಲನಾದರೆ ಮತ್ತೆ ಒಂದು ವರ್ಷ ಸಾದಾ ಸಜೆ ಅನುಭವಿಸಬೇಕು ಎಂದು ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ಮೂಲಗಳು ನೀಡಿದ ಮಾಹಿತಿ ಆಧರಿಸಿ ಲೋಕಾಯುಕ್ತ ಪೊಲೀಸರು 2013ರ ಫೆ. 15ರಂದು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.

‘ಆದೇಶ ಪ್ರಕಟವಾದ ಬಳಿಕ ಕೊಂಡಗೂಳಿಯನ್ನು ಬಂಧಿಸಿ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಅವರು ಆದಾಯಕ್ಕಿಂತ ಶೇ 237.5ರಷ್ಟು ಹೆಚ್ಚು ಆಸ್ತಿ ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿತ್ತು’ ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಗಣೇಶ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

astr
- Advertisement -

Related news

error: Content is protected !!