Sunday, May 19, 2024
spot_imgspot_img
spot_imgspot_img

ಮಂಗಳೂರು: 65ವರ್ಷದ ವೃದ್ಧನಿಂದ ಬುದ್ದಿಮಾಂದ್ಯೆಯ ಅತ್ಯಾಚಾರ ಆರೋಪ

- Advertisement -G L Acharya panikkar
- Advertisement -
vtv vitla

ಮಂಗಳೂರು: ಸುರತ್ಕಲ್ ಸಮೀಪದ ಪ್ರದೇಶವೊಂದರ ಬುದ್ಧಿಮಾಂದ್ಯೆಯನ್ನು ಅತ್ಯಾಚಾರಗೈದ ಆರೋಪದಲ್ಲಿ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್‌ಭಟ್(65) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸೂರಿಂಜೆ ಮೂಲದ ಆರೋಪಿ ರಾಜ್‌ಭಟ್ ಬ್ರೋಕರ್ ಕೆಲಸ ಮಾಡಿಕೊಂಡಿದ್ದು, ಚೇಳಾಯಾರು ಪದವು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.

ಮಾ.27ರಂದು ಆರೋಪಿಯು ಬುದ್ಧಿಮಾಂದ್ಯೆಯನ್ನು ಆಕೆಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ವಿವಾಹಿತನಾಗಿದ್ದು, ಪತ್ನಿ ಮತ್ತು ಮಕ್ಕಳಿಂದ ದೂರವಾಗಿದ್ದಾನೆ ಎಂದು ತಿಳಿದುಬಂದಿದೆ. ಅತ್ಯಾಚಾರ ಎಸಗಿದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗುತ್ತಲೇ ಆರೋಪಿಯು ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.

- Advertisement -

Related news

error: Content is protected !!