Friday, April 26, 2024
spot_imgspot_img
spot_imgspot_img

ಮಂಗಳೂರು: PFI,SDPI ಕಾರ್ಯಕರ್ತರಿಗೆ ಮತ್ತೆ ಬಿಗ್‌ಶಾಕ್‌; ದ.ಕ ಜಿಲ್ಲಾಧ್ಯಕ್ಷ ಸೇರಿ ಹತ್ತು ಮಂದಿ ಪೊಲೀಸ್‌ ವಶಕ್ಕೆ

- Advertisement -G L Acharya panikkar
- Advertisement -

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮುಖಂಡರ ಮನೆ ಮೇಲೆ ದಾಳಿ ನಡೆಸಿ ಹತ್ತು PFI ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ, ಸುರತ್ಕಲ್, ಪುತ್ತೂರು, ಬಜ್ಪೆ, ತಲಪಾಡಿ ಹಾಗೂ ಕಾವೂರಿನಲ್ಲಿ ಪೊಲೀಸರು ದಾಳಿ ನಡೆಸಿದ್ದು, ಪಿಎಸ್ ಐ ದ.ಕ. ಜಿಲ್ಲಾಧ್ಯಕ್ಷ ಇಜಾಜ್‌ ಅಹಮದ್‌, ಫಿರೋಜ್ ಖಾನ್, ನೌಫಲ್, ಮುಜಾವರ್ ಮತ್ತು ರಾಜಿಕ್ ಸೇರಿದಂತೆ ಹತ್ತು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್ 107, 157 ಕಾಯ್ದೆಯಡಿ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ PFI ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೂಡೆ, ಗಂಗೊಳ್ಳಿ ಸೇರಿದಂತೆ ಉಡುಪಿ ಜಿಲ್ಲೆಯ ಒಟ್ಟು ನಾಲ್ಕು ಕಡೆ ದಾಳಿ ನಡೆಸಿದ ಪೊಲೀಸರು ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಬಂಟ್ವಾಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್

ಈ ಹಿನ್ನೆಲೆಯಲ್ಲಿ ಬಂಟ್ವಾಳ ಬಿ.ಸಿ.ರೋಡ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈಗಾಗಲೇ ಕೆಲ ದಿನಗಳಿಂದ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಿಎಫ್ ಐ ಕಾರ್ಯಕರ್ತರ ಬಂಧನ ಹಾಗೂ ವಿಚಾರಣೆ ನಡೆಯುತ್ತಿದ್ದು, ಇದರ ಒಂದು ಭಾಗವಾಗಿ ಈ ಕಾರ್ಯಾಚರಣೆ ವರಿಷ್ಠ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸರು ಕೈಗೊಂಡಿದ್ದಾರೆ.

ಬಂಟ್ವಾಳ ಸುತ್ತಮುತ್ತಲಿರುವ ಪಿಎಫ್ಐ ಕಾರ್ಯಕರ್ತರ ಮನೆಗಳಿಗೆ ತೆರಳಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಅವರನ್ನು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ಕಾರ್ಯನಿರ್ವಾಹಕ ನ್ಯಾಯಾಧೀಶರೂ ಆಗಿರುವ ಬಂಟ್ವಾಳ ತಹಸೀಲ್ದಾರ್ ಡಾ. ಸ್ಮಿತಾ ರಾಮು ಅವರ ಮುಂದೆ ಹಾಜರುಪಡಿಸಿದ್ದಾರೆ.

vtv vitla
- Advertisement -

Related news

error: Content is protected !!