Saturday, April 27, 2024
spot_imgspot_img
spot_imgspot_img

ಮಂಗಳೂರು: SSLC ಪರೀಕ್ಷೆ ಹಿನ್ನಲೆ; ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ – ಜಿಲ್ಲಾಧಿಕಾರಿ ಆದೇಶ

- Advertisement -G L Acharya panikkar
- Advertisement -
vtv vitla

ಮಂಗಳೂರು: ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದೆ. ಈ ಹಿನ್ನಲೆ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಏ.15ರ ವರಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ನಿಷೇಧಾಜ್ಞೆ ಆದೇಶಿಸಿದ್ದಾರೆ.

- Advertisement -

Related news

error: Content is protected !!