Monday, April 29, 2024
spot_imgspot_img
spot_imgspot_img

ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಖಾಕಿ ಬಲೆಗೆ; 13 ಮಕ್ಕಳ ರಕ್ಷಣೆ!

- Advertisement -G L Acharya panikkar
- Advertisement -
driving

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಡವರಿಂದ ಕಡಿಮೆ ಹಣಕ್ಕೆ ಮಕ್ಕಳನ್ನು ಖರೀದಿಸಿ ಮಕ್ಕಳಿಲ್ಲದ ಪೋಷಕರನ್ನು ಟಾರ್ಗೆಟ್ ಮಾಡಿ ಅವರಿಗೆ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

ಬಂಧಿತ ಆರೋಪಿಗಳು ದೇವಿಷಣ್ಮುಗಮ್ಮ, ಮಹೇಶ್ ಕುಮಾರ್, ಜನಾರ್ಧನ್, ರಂಜನಾ ದೇವಿಪ್ರಸಾದ್, ಧನಲಕ್ಷ್ಮೀ ಎನ್ನಲಾಗಿದೆ. ಬಸವನಗುಡಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ 11 ಮಕ್ಕಳನ್ನು ಮಾರಾಟ ಮಾಡಿರುವುದು ಬೆಳಕಿಗೆ ಬಂದಿದ್ದು, ಇನ್ನೂ 18 ಮಕ್ಕಳನ್ನು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು ದಕ್ಷಿಣ ಪೊಲೀಸರ ಬಹು ದೊಡ್ಡ ಕಾರ್ಯಾಚರಣೆಯಲ್ಲಿ ಸುಮಾರು 13 ಮಕ್ಕಳನ್ನು ರಕ್ಷಿಸಲಾಗಿದೆ. ಬಾಡಿಗೆ ತಾಯಿ ಮೂಲಕ ಮಕ್ಕಳು ಕೊಡುತ್ತೀವಿ ಅಂತ ಲಕ್ಷ ಲಕ್ಷ ಹಣ ವಸೂಲಿ ಮಾಡಿ ವಂಚನೆ ಮಾಡುತ್ತಿದ್ದರು. ಬಡ ಕುಟಂಬದ ಮಕ್ಕಳನ್ನ ಕಡಿಮೆ ಹಣಕ್ಕೆ ಖರೀದಿಸಿ ಮಾರಾಟ ಮಾಡುತ್ತಿದ್ದರು.

ಬಾಡಿಗೆ ತಾಯಿ ಮೂಲಕ ಮಗು ಆಗಿದೆ ಎಂದು ನಂಬಿಸಿ ವಂಚಿಸುತ್ತಿದ್ದರು. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಯವರಿಗೆ ಈ ತಂಡ ವಂಚಿಸುತ್ತಿತ್ತು. ಹಣ ಪಡೆದು ಮಗು ಮಾರಾಟ ಮಾಡುವಾಗ ಪೊಲೀಸರು ದಾಳಿ ನಡೆಸಿದ್ದಾರೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!