Tuesday, March 19, 2024
spot_imgspot_img
spot_imgspot_img

ಮಕ್ಕಳನ್ನು 1 ನೇ ತರಗತಿಗೆ ಸೇರಿಸಲು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು; ಸರ್ಕಾರ ಆದೇಶ

- Advertisement -G L Acharya panikkar
- Advertisement -

ಬೆಂಗಳೂರು: ಒಂದನೇ ತರಗತಿಗೆ ಮಕ್ಕಳನ್ನು ಸೇರಿಸುವ ವಯಸ್ಸಿನ ಮಿತಿಯನ್ನು ಸರ್ಕಾರ ಪರಿಷ್ಕರಣೆಗೊಳಿಸಿದೆ. ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದು, ಪ್ರಸಕ್ತ ವರ್ಷದಲ್ಲಿ ದಾಖಲಾತಿ ಆರಂಭವಾಗಿರುವುದರಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಪರಿಷ್ಕೃತ ಆದೇಶ ಜಾರಿಗೆ ಬರಲಿದೆ. ಈ ಹಿಂದೆ 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳ ವಯೋಮಿತಿ ನಿಗದಿಪಡಿಸಿದ್ದು, ಈಗ ಎಲ್ಲಾ ಆದೇಶಗಳನ್ನು ಹಿಂಪಡೆಯಲಾಗಿದೆ.

ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು. ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಆಯಾ ಶೈಕ್ಷಣಿಕ ವರ್ಷದ ಜೂನ್ ಒಂದಕ್ಕೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ವಯೋಮಿತಿ ನಿಗದಿಪಡಿಸಲಾಗಿದೆ.

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009 ಮತ್ತು 2012 ರ ಕಡ್ಡಾಯ ಶಿಕ್ಷಣ ನಿಯಮಗಳ ಅನ್ವಯ ಶಿಕ್ಷಣ ಇಲಾಖೆ ಆಯುಕ್ತರು ಸಲ್ಲಿಸಿದ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿದೆ. 6 ವರ್ಷವಾಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುವುದು ಎಂದು ಹೇಳಲಾಗಿದೆ.

- Advertisement -

Related news

error: Content is protected !!