Friday, March 29, 2024
spot_imgspot_img
spot_imgspot_img

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಗರಿಮೆ

- Advertisement -G L Acharya panikkar
- Advertisement -

ಮಡಿಕೇರಿ: ಚಾಲನೆಯಲ್ಲಿದ್ದ ಹಿಟ್ಟಿನ ಗಿರಣಿ ಬೆಲ್ಟ್‌ಗೆ ಆಕಸ್ಮಿ ಕವಾಗಿ ತಾಯಿಯ ತಲೆ ಸಿಲುಕಿದಾಗ ಸಮಯ ಪ್ರಜ್ಞೆ ಮೆರೆದು ತಾಯಿಯ ಪ್ರಾಣ ಉಳಿಸಿದ ೯ ವರ್ಷದ ಬಾಲಕನಿಗೆ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಅರಸಿ ಬಂದಿದೆ. ಮಡಿಕೇರಿಯ ಕೂಡ್ಲೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿ ದೀಕ್ಷಿತ್‌ ಪ್ರಶಸ್ತಿಗೆ ಆಯ್ಕೆಯಾದ ವಿದ್ಯಾರ್ಥಿ.

ಮೂರನೇ ತರಗತಿಯ ಬಾಲಕ ದೀಕ್ಷಿತ್‌ ಗೆ ಜ.26ರಂದು ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ವಿತರಣ ಸಮಾರಂಭದಲ್ಲಿ ದೀಕ್ಷಿತ್‌ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಸ್ವೀಕರಿಸಲಿದ್ದಾನೆ ಎಂದು ತಿಳಿದುಬಂದಿದೆ‌.

ದೀಕ್ಷಿತ್‌ ತಾಯಿ ಅರ್ಪಿತಾ ಕೂಡೂರು ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ಅಕ್ಕಿ ಪುಡಿ ಮಾಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗಿರಣಿಯ ಬೆಲ್ಟ್ ಗೆ ಅವರ ತಲೆ ಸಿಲುಕಿಕೊಂಡು ಜೋರಾಗಿ ಕಿರುಚಿಕೊಂಡಿದ್ದರು. ಅಲ್ಲೇ ಆಟವಾಡುತ್ತಿದ್ದ ಬಾಲಕ ತಾಯಿಯ ಕೂಗು ಕೇಳಿಸಿಕೊಂಡು ಓಡಿ ಬಂದು ಗಿರಣಿಯ ವಿದ್ಯುತ್‌ ಸರಬರಾಜಿನ ಸ್ವಿಚ್‌ ಆಫ್ ಮಾಡಿ ತಾಯಿಯನ್ನು ರಕ್ಷಿಸಿದ್ದಾನೆ. ಬಾಲಕನ ಸಮಯಪ್ರಜ್ಞೆ ವ್ಯಾಪಕ ಮೆಚ್ಚುಗೆಗೆ ಕಾರಣವಾಗಿತ್ತು ಎಂದು ವರದಿ ತಿಳಿಸಿದೆ.

- Advertisement -

Related news

error: Content is protected !!