Friday, May 3, 2024
spot_imgspot_img
spot_imgspot_img

ಮಡಿಕೇರಿ: ತಾಯಿ-ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಅತ್ತೆಯ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ರಕ್ಷಣೆ

- Advertisement -G L Acharya panikkar
- Advertisement -

ಮಡಿಕೇರಿ: ಮಹಿಳೆ ತನ್ನ ಎರಡು ವರ್ಷದ ಮಗುವಿನೊಂದಿಗೆ ಆಸ್ಪತ್ರೆಗೆಂದು ಹೊರಟು ಕಾಣೆಯಾಗಿದ್ದ ಪ್ರಕರಣ ಸುಖಾಂತ್ಯಗೊಂಡಿದ್ದೆ.

ಅತ್ತೆಯ ಕಿರುಕುಳದಿಂದ ಮನನೊಂದು ಎರಡು ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಧರ್ಮಸ್ಥಳ ಪೊಲೀಸರು ಪಾರು ಮಾಡಿದ್ದಾರೆ. ಮಡಿಕೇರಿಯ ಶುಂಠಿಕೊಪ್ಪ ಸಮೀಪದ ಗರಗಂದೂರು ಗ್ರಾಮದ ಮಲ್ಲಿಕಾರ್ಜುನ ಕಾಲೊನಿ ಮಹಿಳೆ ಮನೆಯಲ್ಲಿ ಅತ್ತೆಯ ಕಿರುಕುಳದಿಂದ ಬೇಸತ್ತಿದ್ದರು.

ದಿ.14ರಂದು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಮಗುವಿನ ಜೊತೆ ಮನೆ ಬಿಟ್ಟಿದ್ದ ಮಹಿಳೆ ಸಂಜೆಯಾದರು ಮನೆಗೆ ಹಿಂತಿರುಗಿ ಬರಲಿಲ್ಲ. ಅನುಮಾನ ಬಂದ ಕುಟುಂಬಸ್ಥರ ಮಹಿಳೆಯ ಪತ್ತೆಗಾಗಿ ಶುಂಠಿಕೊಪ್ಪ ಪೋಲಿಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಿಸಿ ಸ್ನೇಹಿತರಿಗೆ ಮಾಹಿತಿ ನೀಡಿದ್ದರು. ಧರ್ಮಸ್ಥಳದ ನೇತ್ರಾವತಿ ನದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಏನಾದರೂ ಹೋಗಿರುವ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಸ್ನೇಹಿತನ ಸಹಕಾರದ ಜೊತೆ ಧರ್ಮಸ್ಥಳ ಪೋಲಿಸರಿಗೆ ಮಾಹಿತಿ ನೀಡಿದ್ದರು.

ಕೂಡಲೇ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಮಡಿಕೇರಿಯಿಂದ ಬರುವ ಬಸ್ ನಲ್ಲಿ ಹುಡುಕಾಟ ನಡೆಸಿದ್ದಾರೆ. ಸ್ಥಳೀಯ ವರದಿಗಾರ ಸುದೀಪ್ ಅವರ ಸಹಾಯದಿಂದ ಮಡಿಕೇರಿಯಿಂದ ಧರ್ಮಸ್ಥಳಕ್ಕೆ ಬರುವ ಬಸ್ ನಲ್ಲಿ ಮಗುವಿನ ಜೊತೆ ಮಹಿಳೆಯನ್ನು ಗುರುತಿಸಿ ಪೊಲೀಸ್ ಠಾಣೆಗೆ ಕರೆದೊಯ್ಯುದ್ದು ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ.

ಬಳಿಕ ಕುಟುಂಬಸ್ಥರಿಗೆ ಮಗು ಮತ್ತು ತಾಯಿಯನ್ನ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಇನ್ನೂ ವಿಚಾರಣೆಯಲ್ಲಿ ಅತ್ತೆಯ ಕಿರುಕುಳದಿಂದ ಆತ್ಮಹತ್ಯೆ ಯತ್ನಿಸಿರುವ ವಿಷಯವನ್ನ ಸ್ವತಃ ‌ಮಹಿಳೆ ಬಾಯಿಬಿಟ್ಟಿದ್ದಾಳೆ. ಧರ್ಮಸ್ಥಳ ಪೊಲೀಸ್ ಠಾಣೆಯ ಪಿ ಎಸ್ ಐ ಕೃಷ್ಣಕಾಂತ ಪಾಟೀಲ್, ಕಾನ್ಸ್‌ಟೇಬಲ್ ಶೇಷಣ್ಣ ಈ ಕಾರ್ಯಚರಣೆ ಭಾಗಿಯಾಗಿದ್ದರು.

vtv vitla
- Advertisement -

Related news

error: Content is protected !!