Tuesday, April 30, 2024
spot_imgspot_img
spot_imgspot_img

ಮಡಿಕೇರಿ: ಪಾರಾಮೆಡಿಕಲ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -G L Acharya panikkar
- Advertisement -

ಮಡಿಕೇರಿ: ವೈದ್ಯಕೀಯ ಕಾಲೇಜಿನಲ್ಲಿ ಪಾರಾಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ನಡೆದಿದೆ.

ಬಡಾವಣೆ ನಿವಾಸಿ ಎಲ್‌ಐಸಿ ಏಜೆಂಟ್ ಸಂತೋಷ್ ಎಂಬವರ ಪುತ್ರಿ ಜಸ್ಮಿತಾ(19) ಆತ್ಮಹತ್ಯೆಗೆ ಶರಣಾಗಿರುವ ಹುಡುಗಿ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು.

ಮಂಗಳವಾರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸ್ ಪಿಎಸ್‌ಐ ಅಪ್ಪಾಜಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಕೆಯ ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ‌ ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!